ಮಂಗಳೂರು: ನಗರದ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನ ಸಂಘನಿಕೇತನದಲ್ಲಿ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ.
ಗುರುವಾರ ಗಣೇಶ ವಿಗ್ರಹವನ್ನು ಮೆರವಣಿಗೆಯಲ್ಲಿ ತರಲಾಯಿತು. ಶುಕ್ರವಾರ ಬೆಳಿಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ದೇವರ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ, ರಾತ್ರಿ ಮೂಡಗಣಪತಿ ಸೇವೆ, ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಿತು.
ಐದು ದಿನಗಳವರೆಗೆ ಸಂಘನಿಕೇತನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ನಿಯಮ ಪಾಲಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್, ರಘುವೀರ್ ಕಾಮತ್, ವಿನೋದ್ ಶೆಣೈ, ಜೀವನರಾಜ್ ಶೆಣೈ, ಸತೀಶ್ ಪ್ರಭು, ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.