ಮಂಗಳೂರು: ಶಿರಾಡಿ ಘಾಟ್ ರಸ್ತೆಗೆ ಶಾಶ್ವತ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಈ ವಾರದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಗ್ರ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿರಾಡಿ ಘಾಟಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಿಪೇರಿ ಮಾಡುವುದಾಗಿ ಹೇಳಿದ್ದರು. ಆದರೆ ಮಾಡಿಲ್ಲ. ಕೆಲಸಗಳು ಇನ್ನೂ ನಡೆಯುತ್ತಿಲ್ಲ. ಹೀಗಾಗಿ ಈ ಬಗ್ಗೆ ವಾರದೊಳಗೆ ಸಭೆ ನಡೆಸುತ್ತೇನೆ ಎಂದರು. ಮಂಗಳೂರು-ಬೆಂಗಳೂರು ನಡುವೆ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಯ ಬಗ್ಗೆ ಮಾಧ್ಯಮ ಪ್ರತಿ ನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮುಂತ್ರಿ ಶೀಘ್ರ ದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರ ಸಭೆ ನಡೆಸಿ ಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತ ಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಅವರು ಬಳಿಕ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾ ಕೇಂದ್ರದ ಕ್ರೀಡಾ ಹಾಗೂ ಸಾಂಸ್ಕೃತಿ ಕೋತ್ಸವ ಉದ್ಘಾಟಿಸಲು ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಶಾಸಕರಾದ ರಾಜೇಶ್ ನಾಯಕ್, ಮನಪಾ ಮೇಯರ್ ಜಯಾನಂದ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಗಡಿ ವಿವಾದ: ಕರ್ನಾಟಕದ ಹಿತರಕ್ಷಣೆಗೆ ಬದ್ಧ : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಮಹಾರಾಷ್ಟ್ರಕ್ಕೆ ರಾಜ್ಯದ ಬಸ್ಸುಗಳು ಓಡಾಡುತ್ತಿವೆ. ಇನ್ನಷ್ಟು ಕ್ರಮ ವಹಿಸಲು ಮಹಾರಾಷ್ಟ್ರ ಸರ್ಕಾರ ಕ್ಕೆ ಸೂಚನೆ ನೀಡಲಾಗಿದೆ. ಡಿ.14 ರಂದು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದೇವೆ ಎಂದರು. ಸೋಮವಾರದಂದು ಸಂಸದರು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕದ ಹಿತರಕ್ಷಣೆ ಹಾಗೂ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಹಿತರಕ್ಷಣೆಯನ್ನೂ ಮಾಡುತ್ತೇವೆ ಎಂದರು.

Discover more from Coastal Times Kannada
Subscribe to get the latest posts sent to your email.







Discussion about this post