ಮುಂಬೈ, ಜ 12: ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಿಸುತ್ತಿದ್ದ ಥೈಲೆಂಡ್ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಶುಕ್ರವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಡಿಆರ್ಐ, ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಅಡಿಸ್ ಅಬಾಬದಿಂದ ಆಗಮಿಸಿದ ಮಹಿಳೆಯನ್ನು ಬಂಧಿಸಿದ್ದಾರೆ.
ಆಕೆಯ ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಬಂದಿರಲಿಲ್ಲ, ಆದರೂ ಅವರ ಟ್ರಾಲಿ ಬ್ಯಾಗ್ನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಬಿಳಿ ಪುಡಿಯಂತಹ ವಸ್ತುವನ್ನು ಹೊಂದಿರುವ ಅನೇಕ ಪ್ಯಾಕೆಟ್ಗಳು ಕಂಡುಬಂದಿವೆ. ನಂತರ ಅದು ಕೊಕೇನ್ ಎಂದು ದೃಢಪಟ್ಟಿದೆ. ಅಂದಾಜು 40 ಕೋಟಿಗಳಷ್ಟು ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ. ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Discussion about this post