ಮಂಗಳೂರು, ಮಾ.12 : ಬೈಕ್ ಸ್ಟಂಟ್ ಮತ್ತು ವೀಲಿಂಗ್ ಮಾಡಿ, ಅದರ ವಿಡಿಯೋವನ್ನು ಸಾಮಾಜಿಕ ಇನ್ಸ್ ಟಾ ಗ್ರಾಮ್ ತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ ಬಗ್ಗೆ ಮಂಗಳೂರಿನ ಟ್ರಾಫಿಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ನಗರ ಹೊರವಲಯ ಹಾಗೂ ಕೆಲವೊಂದು ಜನಸಂಚಾರ ಕಡಿಮೆ ಇರುವ ಪ್ರದೇಶಗಳಲ್ಲಿ ವೀಲಿಂಗ್, ಸ್ಟಂಟ್ ಮಾಡುವ ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ ಟಾ ಗ್ರಾಮ್ ತಾಣದಲ್ಲಿ ಅಪ್ಲೋಡ್ ಮಾಡಲಾಗುತ್ತಿತ್ತು. ಈ ವಿಡಿಯೋ ವೈರಲ್ ಆಗಿದ್ದು ಯುವಕರು ಅಪಾಯಕಾರಿ ರೀತಿಯಲ್ಲಿ ನಡು ರಸ್ತೆಯಲ್ಲೇ ಸ್ಟಂಟ್ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ವಶಕ್ಕೆ ಪಡೆದಿರುವ ಬೈಕ್‌ಗಳು
ಜಾಲತಾಣದ ಬಗ್ಗೆ ನಿಗಾ ಇಡುವ ತಂಡದ ಮೂಲಕ ವಿಡಿಯೋ ಹಾಕಿದವರನ್ನು ಮತ್ತು ರೆಕಾರ್ಡ್ ನಡೆಸಿರುವ ಸ್ಥಳವನ್ನು ಪತ್ತೆಹಚ್ಚಿ ಸಂಬಂಧಪಟ್ಟ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಅನಾಜ್, ಕಿಶನ್ ಕುಮಾರ್, ತೌಸಿಫ್ ಮೊಹಮ್ಮದ್, ಮೊಹಮ್ಮದ್ ಸ್ವಾಲಿ, ಮೊಹಮ್ಮದ್, ಅಬ್ದುಲ್ ಜಬ್ಬಾರ್ ಸಿದ್ದಿಕ್, ಇಲ್ಯಾಸ್ ಬಂಧಿತರಾಗಿದ್ದು ಇನ್ನೊಬ್ಬ ಆರೋಪಿ ಅಪ್ರಾಪ್ತನಾಗಿದ್ದಾನೆ.
ಇವರ ಮೇಲೆ ನಾಲ್ಕು ಪ್ರತ್ಯೇಕ ಕೇಸ್ ದಾಖಲಿಸಿದ್ದು ಬಂಧಿತರ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಲು ಆರ್ ಟಿಓ ಅಧಿಕಾರಿಗಳಿಗೆ ಬರೆಯುವುದಾಗಿ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಆರೋಪಿಗಳಿಂದ ಐದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ಡಿಸಿಪಿ ಅಪರಾಧ ವಿಭಾಗದ ದಿನೇಶ್ ಕುಮಾರ್ ಮತ್ತು ಎಸಿಪಿ ನಟರಾಜ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post