ವಿಟ್ಲ: ನೇರಳಕಟ್ಟೆ ಭಗವಂತಕೋಡಿ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಶ್ರಫ್ ಜಿ., ಆಶ್ರಫ್ ಎನ್ ಎ., ಅಫ್ವಾನ್ ಮತ್ತು ಹಫೀಝ್ ಯಾನೆ ಅಪ್ಪಿ ಬಂಧಿತ ಆರೋಪಿಗಳು, ಅವರಿಂದ 1.79,700ರೂ. ಅಂದಾಜು ಬೆಲೆಯ 17.97 ಗ್ರಾಂ ತೂಕದ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತು ಎಮ್.ಡಿ.ಎಮ್.ಎಯನ್ನು ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸರು ಅಶ್ರಫ್ ಜಿ,ಯ ಮನೆಗೆ ತೆರಳಿದಾಗ ಅಲ್ಲಿ ಆತ ಜತೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ. ಅವರಿದ್ದರು. ಆತನ ಮನೆಯನ್ನು ಪರಿಶೀಲಿಸಿದಾಗ ಎಂಡಿಎಂಎ ಮಾದಕ ವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿವೆ, ಅವುಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post