ಮಂಗಳೂರು: ನಗರದ ಕದ್ರಿ ಮಂಜುನಾಥ ದೇವಸ್ಥಾನದ ಅಂಗಣಕ್ಕೆ ಮೂವರು ಯುವಕರು ಬೈಕಿನಲ್ಲಿ ಗುರುವಾರ ರಾತ್ರಿ ಪ್ರವೇಶಿಸಿದ್ದು, ಅವರನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕರು ಮಾತನಾಡಿರುವ ವಿಡಿಯೊವನ್ನು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಬಳಗದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, ಯುವಕರು ತಮ್ಮನ್ನು ಮುಸ್ಲಿಮರೆಂದೂ ಅಸೈಗೋಳಿಯವರು ಎಂದೂ ಹೇಳಿಕೊಂಡಿದ್ದಾರೆ.

‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ಆದರೆ ಮೂವರು ಯುವಕರು ಕೂಡ ಒಂದೇ ಪ್ರಾಯದವರಾಗಿದ್ದು 18-19ರ ಹಾಗಿದ್ದಾರೆ. ಆರು ತಿಂಗಳ ಹಿಂದೆ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್, ಕದ್ರಿ ದೇಗುಲದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ. ಇದೀಗ ರಾತ್ರಿ ವೇಳೆ ಆಗಂತುಕರ ರೀತಿ ಬಂದು ಯುವಕರು ಅಂಗಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಅವರಿಂದ ಸೂಕ್ತ ಉತ್ತರ ಬಾರದಿದ್ದಾಗ ಪೊಲೀಸರಿಗೆ ಒಪ್ಪಿಸಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್, “ಘಟನೆಯಲ್ಲಿ ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ. ಗೂಗಲ್ ಮ್ಯಾಪ್ ಹಾಕಿ ದಾರಿ ತಪ್ಪಿ ಬಂದಿರುವುದಾಗಿ ಯುವಕರು ತಿಳಿಸಿದ್ದಾರೆ. ವಿಚಾರಣೆ ಮುಂದುವರಿಸಲಾಗಿದೆ” ಎಂದು ಹೇಳಿದರು.
Discover more from Coastal Times Kannada
Subscribe to get the latest posts sent to your email.







Discussion about this post