• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ

Coastal Times by Coastal Times
June 12, 2022
in ಕರಾವಳಿ
ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ
112
VIEWS
WhatsappTelegramShare on FacebookShare on Twitter

ಉಳ್ಳಾಲ: ಕ್ಯಾನ್ಸರ್ ಈಗ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕಾಡುತ್ತಿರುವ ಕಾಯಿಲೆಯಾಗಿದ್ದು ಸೂಕ್ತ ಸಮಯದಲ್ಲಿ ಪತ್ತೆ ಮಾಡಿ ಚಿಕಿತ್ಸೆ ನೀಡಿದರೆ ರೋಗಿ ಗುಣಮುಖವಾಗಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.‌

ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್ ಸಹಯೋಗದಲ್ಲಿ ನಿರ್ಮಿಸಿರುವ ಜುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಬೆಂಗಳೂರು ಮತ್ತು ಮುಂಬೈ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡಿರುವ ಆಸ್ಪತ್ರೆ ಆರಂಭವಾಗಿರುವುದು ಹೆಮ್ಮೆಯ ವಿಷಯ. ಟಾಟಾ ಟ್ರಸ್ಟ್‌ನ ಕ್ಯಾನ್ಸರ್ ಫ್ರೀ ಅಭಿಯಾನದಂಗವಾಗಿ ಸ್ಥಾಪಿಸಿರುವ ಈ ಆಸ್ಪತ್ರೆ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ’ ಎಂದು ಸಚಿವರು ಅಭಿಪ್ರಾಯಪಟ್ಟರು. ‘ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯ ಚೆನ್ನಾಗಿದೆ. ಕೋವಿಡ್–19ರ ಸಂದರ್ಭದಲ್ಲಿ ಒಟ್ಟಾಗಿ ದುಡಿದ ಕಾರಣ ಹೆಚ್ಚಿನ ಸಮಸ್ಯೆ ಆಗಲಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಇತರ ಜಿಲ್ಲೆಗಳಿಗಿಂತ ಈ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳು ಮತ್ತು ಗುಣಮಟ್ಟದ ಆಸ್ಪತ್ರೆಗಳು ಇರುವುದರಿಂದ ಇಲ್ಲಿಗೆ ಹೊರರಾಜ್ಯ ಹಾಗೂ ಬೇರೆ ಜಿಲ್ಲೆಯವರು ಬರುತ್ತಾರೆ’ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಟಾಟಾ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀನಾಥ್ ಎನ್ ‘1941ರಲ್ಲಿ ಆರಂಭಗೊಂಡ ಟಾಟಾ ಕೇರ್ ದೇಶದಲ್ಲಿ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜನರ ಕೈಗಳನ್ನು ಬಲಪಡಿಸಿದೆ. ರೋಗಿಗಳ ಆರೈಕೆಯ ಜವಾಬ್ದಾರಿಯನ್ನು ಸಿಬ್ಬಂದಿ ಸಮರ್ಥವಾಗಿ ನಿಭಾಯಿಸಬೇಕು’ ಎಂದರು.

ಶಾಸಕ ಯು.ಟಿ. ಖಾದರ್, ವಿಶ್ವದಲ್ಲೇ ಕ್ಯಾನ್ಸರ್ ರೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಅಗತ್ಯವಾಗಿದೆ ಎಂದರು. ಯೆನೆಪೋಯ ವಿವಿ ಕುಲಪತಿ ಯೆನೆಪೋಯ ಅಬ್ದುಲ್ಲ ಕುಂಞಿ ಅಧ್ಯಕ್ಷತೆ ವಹಿಸಿದ್ದರು. ಹಜ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಬ್ದುಲ್ಲ ಕುಟ್ಟಿ, ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಮೊಹಮ್ಮದ್ ಕುಂಞಿ ಇದ್ದರು. ರೇಡಿಯೋಥೆರಪಿ ವಿಭಾಗವನ್ನು ಶ್ರೀನಾಥ್ ಎನ್, ಡೇ ಕೇರ್ ಕಿಮೋಥೆರಪಿ ಕೇಂದ್ರವನ್ನು ಯು.ಟಿ ಖಾದರ್, ನ್ಯೂಕ್ಲಿಯರ್ ಮೆಡಿಸಿನ್ ವಿಭಾಗವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಹೊರರೋಗಿ ಚಿಕಿತ್ಸಾ ಕೇಂದ್ರವನ್ನು ಶಾಸಕ ಯು.ರಾಜೇಶ್ ನಾಯ್ಕ್ ಉದ್ಘಾಟಿಸಿದರು.

ಶಾಸಕರಾದ ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ ಹಾಗೂ ಪ್ರತಾಪ್ ಸಿಂಹ ನಾಯಕ್ ಇದ್ದರು. ಗಂಗಾಧರ್ ಸೋಮಯಾಜಿ ಸ್ವಾಗತಿಸಿದರು. ವಿಜಯ್ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಜಲಾಲುದ್ದೀನ್ ಅಕ್ಬರ್ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರಿಂದ ಫೈರಿಂಗ್

Next Post

ನಟಿ ಅನುಷ್ಕಾಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್! ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು

Related Posts

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ
ಕರಾವಳಿ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
21
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು
ಕರಾವಳಿ

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
59
Next Post
ನಟಿ ಅನುಷ್ಕಾಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್! ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು

ನಟಿ ಅನುಷ್ಕಾಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್! ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು

Discussion about this post

Recent News

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
21
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d