ಮಂಗಳೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರಿಗೆ ತೆರಳಲು ವಿಶೇಷ ವಿಮಾನದ ಮೂಲಕ ಶುಕ್ರವಾರ ಮಧ್ಯಾಹ್ನ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿದ ವಿಜಯ್ ಅವರನ್ನು ಕರ್ನಾಟಕ ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಸ್ವಾಗತಿಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.

ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವಿಮಾನ ನಿಲ್ದಾಣದಿಂದ ವಿಜಯ್ ನೇರವಾಗಿ ರಸ್ತೆ ಮಾರ್ಗದ ಮೂಲಕ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿದರು.
Discover more from Coastal Times Kannada
Subscribe to get the latest posts sent to your email.







Discussion about this post