• About us
  • Contact us
  • Disclaimer
Saturday, August 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ

Coastal Times by Coastal Times
July 12, 2026
in ಕ್ರೈಮ್ ನ್ಯೂಸ್
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿ ನೌಶಾದ್, ಅಬ್ದುಲ್ ನಾಸಿರ್ ಬಂಧನ
38
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆಹಾಕಿದ್ದು ನಾಲ್ಕು ವರ್ಷಗಳಿಂದ ಅಡಗಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕಡೆಗೂ ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (32) ಬೆಂಗಳೂರಿನಲ್ಲಿ ಸಿಕ್ಕಿಬಿದ್ದರೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ (41) ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

ಕೃತ್ಯ ಎಸಗಿದ್ದ ಪ್ರಮುಖ ಆರೋಪಿಗಳಿಗೆ ಮೈಸೂರು ಮತ್ತು ಚಾಮರಾಜನಗರದಲ್ಲಿ ಹಾಗೂ ತಮಿಳುನಾಡಿನ ಈರೋಡ್ ನಲ್ಲಿ ಅಡಗಿಕೊಳ್ಳಲು ವ್ಯವಸ್ಥೆ ಮಾಡಿದ್ದ ಆರೋಪ ಇವರ ಮೇಲಿದ್ದು ಒಟ್ಟು 27 ಜನ ಆರೋಪಿಗಳ ಲಿಸ್ಟ್ ನಲ್ಲಿ ಇವರನ್ನೂ ಸೇರಿಸಲಾಗಿತ್ತು. ಪ್ರಕರಣದ ಬೆನ್ನತ್ತಿದ್ದ ಎನ್ಐಎ ಅಧಿಕಾರಿಗಳು ಒಬ್ಬೊಬ್ಬರನ್ನೇ ಬಲೆಗೆ ಕೆಡವಿದ್ದರು. ಕೊನೆಗೆ ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರಿಂದ ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ಬಹುಮಾನ ಘೋಷಿಸಿದ್ದರು. ಈ ಪೈಕಿ ಸೋನವಾರಪೇಟೆಯ ಹಾನಗಲ್ಲು ಸಿವಾಸಿ ಅಬ್ದುಲ್ ನಾಸಿರ್ (24) ವಿದೇಶಕ್ಕೆ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿತ್ತು. ಆದರೂ ತನಿಖೆ ನಡೆಸಿದ್ದ ಎನ್ಐಎ ಅಧಿಕಾರಿಗಳು 2025ರ ಎಪ್ರಿಲ್ ನಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳ ಬಗ್ಗೆಯೂ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್ಐ ಕಾರ್ಯಕರ್ತರು ಹಿಂದು ಮುಖಂಡರನ್ನು ಗುರಿಯಾಗಿಸಿದ ಟಾರ್ಗೆಟ್ ಹತ್ಯೆಯ ಭಾಗವಾಗಿ ಕೊಲೆ ನಡೆಸಿದ್ದರು ಎಂಬುದಾಗಿ ಎನ್ಐಎ ಜಾರ್ಜ್ ಶೀಟ್ ಸಲ್ಲಿಸಿತ್ತು. ತಲೆಮರೆಸಿಕೊಂಡಿದ್ದವರು ವೇಷ ಮರೆಸಿಕೊಂಡು ಬೆಂಗಳೂರು ಮತ್ತು ಕೇರಳದಲ್ಲಿ ಅಡಗಿದ್ದಾರೆಂಬ ಶಂಕೆಯಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ಕೊಟ್ಟವರಿಗೆ ತಲಾ ಎರಡು ಲಕ್ಷದ ಬಹುಮಾನದ ಆಫರ್ ನೀಡಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

Next Post

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

Related Posts

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
45
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
21
Next Post
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

"Mangalore IAS – A School for Civil Services" ಸಂಸ್ಥೆ ಉದ್ಘಾಟನೆ

Discussion about this post

Recent News

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
52
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d