• About us
  • Contact us
  • Disclaimer
Saturday, September 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Coastal Times by Coastal Times
August 12, 2026
in ಆರೋಗ್ಯ, ರಾಜ್ಯ
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
40
VIEWS
WhatsappTelegramShare on FacebookShare on Twitter

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಯಮಗಳ ಅಡಿಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ​ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತನಿಖೆ ಮತ್ತು ದಾಳಿ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಮತ್ತು ನಿಷೇಧಿತ ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.

ವಿಶೇಷ ಕಾರ್ಯಾಚರಣೆ ಮತ್ತು ಕಠಿಣ ಕ್ರಮ: ರಾಜ್ಯಾದ್ಯಂತ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ನಿಷೇಧಿತ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಇದರೊಂದಿಗೆ, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟ ಅಥವಾ ಸಂಗ್ರಹಣೆ ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆರೋಗ್ಯಕರ ಹಾಗೂ ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಸಾರ್ವಜನಿಕರು ಸರ್ಕಾರದ ಈ ಮಹತ್ತರ ಆಂದೋಲನಕ್ಕೆ ಪೂರ್ಣ ಸಹಕಾರ ನೀಡಬೇಕಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

Next Post

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
ರಾಜ್ಯ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
14
Next Post
ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

Discussion about this post

Recent News

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
43
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d