ಮಂಗಳೂರು, ಸೆ. 11: ಎಐ ಆಧಾರಿತ ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳನ್ನು ಅಪಮಾನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯಿಂದ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ.
“Fact Vid” ಎಂಬ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಎಐ ಆಧಾರಿತ ಹಿಂದೂ ದೇವರ ಅಶ್ಲೀಲ ಚಿತ್ರಗಳನ್ನು ರಚಿಸಿ ಪೋಸ್ಟ್ ಮಾಡಲಾಗಿದೆ. ಶಿವ, ಕೃಷ್ಣ, ರಾಮ, ಗಣೇಶ ದೇವರು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ ಚಿತ್ರಿಸಲಾಗಿದೆ. ಓಡಿಸುತ್ತಿರುವಂತೆ, ಕುಸ್ತಿ ಆಡುತ್ತಿರುವಂತೆ ವಿವಿಧ ರೀತಿಯಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ರೀತಿ ದೇವರನ್ನು ವಿಡಂಬನೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಕೋಮು ಸಾಮರಸ್ಯ ಕದಡಿ ಗಲಭೆ ಸೃಷ್ಟಿಸಲು ಪ್ರಯತ್ನ ನಡೆಸುತ್ತಿರುವ ಫೇಸ್‌ಬುಕ್‌ನ ಅಡ್ಮಿನ್ ಹಾಗೂ ಅವಹೇಳನಕಾರಿಯಾಗಿ ಕಾಮೆಂಟ್ಸ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
Discussion about this post