ಮಂಗಳೂರು, ಸೆ.12: ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪಾವಿತ್ರ್ಯತೆಯ, ಪೂಜ್ಯನೀಯ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತರವನ್ನು ವಿರೋಧಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಒಗ್ಗಟ್ಟಾಗಿ, ‘ಸಹಕಾರ ರತ್ನ’ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ’ಯನ್ನು ದಿನಾಂಕ : 14-9-2025ನೇ ಭಾನುವಾರ ನಡೆಸಲಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ತಿಳಿಸಿದ್ದಾರೆ.
ಮಧ್ಯಾಹ್ನ 12.00 ಗಂಟೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ ಪದಾಧಿಕಾರಿಗಳು, ಸದಸ್ಯರುಗಳು ಉಜಿರೆಯಲ್ಲಿ ಒಟ್ಟುಸೇರಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರ ನಡೆಸಸಿದ್ದಾರೆ. ಇದರಲ್ಲಿ ಸುಮಾರು 1500ಕ್ಕೂ ಅಧಿಕ ಸಹಕಾರಿ ಸಂಘಗಳ 3000ಕ್ಕೂ ಅಧಿಕ ವಾಹನಗಳಲ್ಲಿ ಸಹಕರಿಗಳು ಧರ್ಮಯಾತ್ರ ಮಾಡಆದ್ದಾರೆ.
ಇದೊಂದು ಧರ್ಮ ಸಂರಕ್ಷಣೆಯ ಯಾತ್ರೆಯಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ಮಾಡುವ ಷಡ್ಯಂತ್ರಿಗಳ ವಿರುದ್ಧ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ, ಪರಸ್ಪರ ಸಹಬಾಳ್ವೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ, ಈ ಧರ್ಮ ಕ್ಷೇತ್ರಕ್ಕೆ ಅಪಚಾರವಾಗವೆಸಗುವ ಷಡ್ಯಂತ್ರಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆ ಆಗಬೇಕಾಗಿದೆ.
ಧರ್ಮಸ್ಥಳ ದೇವಸ್ಥಾನದ ಅಪಖ್ಯಾತಿಗೆ ಕಾರಣರಾದ ಪಿತೂರಿಗಾರರ ವಿರುದ್ಧ ಈ ಯಾತ್ರೆ ನಡೆಯಲಿದೆ. ಸಹಕಾರಿ ಕ್ಷೇತ್ರಗಳ ಸದಸ್ಯರು ಸಾಮರಸ್ಯದಿಂದ ಬದುಕುತ್ತಾರೆ ಮತ್ತು ಧರ್ಮಸ್ಥಳದ ಬಗ್ಗೆ ಆ ವಲಯಕ್ಕೆ ಗೌರವವಿದೆ. ಈ ರ್ಯಾಲಿಯ ಮೂಲಕ ಪಿತೂರಿಗಾರರಿಗೆ ಸ್ಪಷ್ಟ ಸಂದೇಶ ರವಾನಿಸುವ ಗುರಿ ಹೊಂದಿದ್ದಾರೆ. ಧರ್ಮಸ್ಥಳವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದೆ ಮತ್ತು ಧರ್ಮಸ್ಥಳದಂತಹ ಧಾರ್ಮಿಕ ಸ್ಥಳವನ್ನು ಅಪಖ್ಯಾತಿಗೆ ಒಳಪಡಿಸುವುದು ಖಂಡನೀಯ ಎಂದು ಅವರು ಹೇಳಿದರು.
Discover more from Coastal Times Kannada
Subscribe to get the latest posts sent to your email.
Discussion about this post