ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳವಾರ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬುವರ ಪತ್ನಿ ಶಾಹಿದಾ(25) ಮತ್ತು ಇವರ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಮಗನ ಜತೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರನ್ನ ಭೇಟಿ ಮಾಡಲು ಹೋಗುತ್ತಿದ್ದರು. ಈ ವೇಳೆ ಬಸ್ ನಿಲ್ದಾಣದ ತಿರುವಿನ ಬಳಿಯೇ ಇರುವ ನಂದಿನಿ ಹಾಲಿನ ಬೂತ್ನ ಎದುರಿನಿಂದ ಮತ್ತೊಂದು ಕಡೆಗೆ ಮಗುವಿನ ಶಾಹಿದಾ ದಾಟಿದ್ದು, ಯಮದೂತನಂತೆ ಅತಿ ವೇಗವಾಗಿ ಬಸ್ ನಿಲ್ದಾಣಕ್ಕೆ ಬಂದ ಬಸ್ ತಾಯಿ-ಮಗುವಿನ ತಲೆ ಮೇಲೆ ಹರಿದಿದೆ. ತಲೆ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.