• About us
  • Contact us
  • Disclaimer
Thursday, March 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನ. 15ರಂದು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಬೆಳ್ಳಿ ಹಬ್ಬ ಸಂಭ್ರಮ, ನ. 21-22ರಂದು ‘ರುಬಿಕಾನ್ 2024’ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ

Coastal Times by Coastal Times
November 12, 2024
in ಕರಾವಳಿ
ನ. 15ರಂದು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಬೆಳ್ಳಿ ಹಬ್ಬ ಸಂಭ್ರಮ, ನ. 21-22ರಂದು ‘ರುಬಿಕಾನ್ 2024’ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ
18
VIEWS
WhatsappTelegramShare on FacebookShare on Twitter

ಮಂಗಳೂರು, ನ.12: ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಹೋಮಿಯೋಪಥಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ದೇರಳಕಟ್ಟೆ, ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ತುಂಬೆ ಇಲ್ಲಿ ನ.15ರಿಂದ 23ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ರೆ.ಫಾ. ರಿಚರ್ಡ್ ಕುವೆಲ್ಲೋ ತಿಳಿಸಿದ್ದಾರೆ.

ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರ ಜತೆ ಆಯೋಜಿಸಲಾದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.

ನ. 15ರಂದು ಬೆಳ್ಳಿ ಹಬ್ಬ ಸಂಭ್ರಮ : ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ 25 ವರ್ಷಗಳ ಶ್ರೇಷ್ಟತೆಯ ಕಾರ್ಯಕ್ರಮ ನ.15ರಂದು ಸಂಜೆ 5:30ಕ್ಕೆ ಸಂಸ್ಥೆಯ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಲಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮೈಸೂರು ಡಯಾಸಿಸ್ನ ಅಪೊಸ್ಟೊಲಿಕ್ ಆಡಳಿತಾಧಿಕಾರಿ ರೆ.ಫಾ. ಡಾ. ಬೆರ್ನಾಡ್ ಮೊರಾಸ್, ಫಾದರ್ ಮುಲ್ಲರ್ ಚಾರಿಟೆಲ್ ಸಂಸ್ಥೆಯ ಮಾಜಿ ನಿರ್ದೇಶಕ ರೆ.ಡಾ. ಅಲೋಶಿಯಸ್ ಪೌಲ್ ಡಿಸೋಜ ಭಾಗವಹಿಸಲಿದ್ದು, ಮಂಗಳೂರು ಬಿಷಪ್ ರೆ.ಡಾ.ಪೀಟರ್ ಪೌಲ್ ಸಲ್ದಾನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೆ.ಫಾ. ಅಜಿತ್ ಮಿನೇಜಸ್ ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಕಾಲೇಜಿನ ಇತಿಹಾಸದ ಬಗ್ಗೆ ಬೆಳಕು ಚೆಲ್ಲುವ ‘ಟಾರ್ಚ್ ಬೈ ಏಂಜಲ್ಸ್’ ಎಂಬ ಕೃತಿ ಬಿಡುಗಡೆಗೊಳ್ಳಲಿದೆ. ಇದೇ ವೇಳೆ ಸಂಸ್ಥೆಯಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸಿದ ವೈದ್ಯರು ಹಾಗೂ ಇತರ ಸಿಬ್ಬಂದಿ ವರ್ಗದವರಿಗೆ ಸನ್ಮಾನ ನೆರವೇರಲಿದೆ. ಸಂಸ್ಥೆಯಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಧರ್ಮಗುರುಗಳನ್ನು ಗೌರವಿಸಲಾಗುವುದು ಎಂದು ಅವರು ಹೇಳಿದರು.

ನ.21-22: ‘ರುಬಿಕಾನ್ 2024’ ಸಮ್ಮೇಳನ : ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 40 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ 27ನೆ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘ರುಬಿಕಾನ್ 2024’ ನ. 21 ಮತ್ತು 22ರಂದು ಕಂಕನಾಡಿಯ ಫಾ. ಮುಲ್ಲರ್ ಕನ್ವೆನ್ಶನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನಿಯೋಜಿತ ನಿರ್ದೇಶಕ ಹಾಗೂ ಆಡಳಿತಾಧಿಕಾರಿ ವಂ. ಪೌಸ್ತಿನ್ ಎಲ್. ಲೋಬೋ ವಿವರ ನೀಡಿದರು.

ನ. 21ರಂದು ಬೆಳಗ್ಗೆ 9:30ಕ್ಕೆ ರಾಜ್ಯ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಹೋಮಿಯೋಪಥಿ ಆಯೋಗದ ಅಧ್ಯಕ್ಷ ಡಾ.ಅನಿಲ್ ಖುರಾನಾ, ಹೋಮಿಯೋಪಥಿ ಶಿಕ್ಷಣ ಮಂಡಳಿಯ ಡಾ. ತಾರಕೇಶ್ವರ್ ಜೈನ್ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಿಳಿಸಿದರು. ಸಮ್ಮೇಳನದಲ್ಲಿ 1000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ ಹೋಮಿಯೋಪಥಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಮಿಲನ್ 5 ಕಾರ್ಯಕ್ರಮ ನ.23ರಂದು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಹೋಮಿಯೋಪಥಿ ಮಹಾವಿದ್ಯಾಲಯ 1985ರಿಂದ ಕಾರ್ಯಾಚರಿಸುತ್ತಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಗುರುತಿಸಲ್ಪಟ್ಟಿದೆ. ಹೋಮಿಯೋಪಥಿ ರಾಷ್ಟ್ರೀಯ ಪರಿಷತ್ತು ಮತ್ತು ಆಯುಷ್ ಇಲಾಖೆಯಿಂದ ಮಾನ್ಯತೆ ಪಡೆದಿದ್ದು, 75 ಹಾಸಿಗೆಗಳ ಒಳರೋಗಿ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಚಿಕಿತ್ಸೆತೆಯನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಪದವಿಯಲ್ಲಿ 100 ಸೀಟುಗಳು ಹಾಗೂ ಸ್ನಾತಕೋತ್ತರ ಪದವಿಯ 7 ವಿಭಾಗಗಳಲ್ಲಿ 48 ಸೀಟುಗಳ ಪರವಾನಿಗೆಯೊಂದಿಗೆ ದೇರಳಕಟ್ಟೆಯಲ್ಲಿ ಅತ್ಯಾಧುನಿಕ ಹಾಗೂ ಪರಿಪೂರ್ಣ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಜ್ಞಾನ ಆರೈಕೆ ಮತ್ತು ಕಲಿಕಾ ಆರೈಕೆಯ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

16ರಂದು ಹೋಮಿಯೋಪತಿ ಫಾರ್ಮಾಸುಟಿಕಲ್ ವಿಭಾಗದ 20ನೆ ವರ್ಷಾಚರಣೆ : ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಫಾರ್ಮಾಸುಟಿಕಲ್ ವಿಭಾಗದ 20ನೇ ವರ್ಷಾಚರಣೆ ನ.16ರಂದು ಬೆಳಗ್ಗೆ 10 ಗಂಟೆಗೆ ದೇರಳಕಟ್ಟೆಯ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ರೆ.ಫಾ. ನೆಲ್ಸನ್ ತಿಳಿಸಿದರು.

18ರಂದು ತುಂಬೆ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಉದ್ಘಾಟನೆ : ತುಂಬೆಯ ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ನಲ್ಲಿ ಆರಂಭಗೊಂಡಿರುವ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ನ.18ರಂದು ಉದ್ಘಾಟನೆಗೊಳ್ಳಲಿದೆ. ಇಮೇಜಿಂಗ್ ಟೆಕ್ನಾಲಜಿ ಹಾಗೂ ಬಿಎಸ್ಸಿ ಇನ್ ಎಟಿ ಮತ್ತು ಒಟಿ ಕೋರ್ಸ್ ಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದ್ದು, ನ.30ರವರೆಗೆ ಆಸಕ್ತ ಅರ್ಹ ವಿದ್ಯಾರ್ಥಿಗಳಿಗೆ ಸೇರ್ಪಡೆಗೆ ಅವಕಾಶವಿದೆ ಎಂದು ಕಾಲೇಜಿನ ನೂತನ ಪ್ರಾಂಶುಪಾಲ ಪ್ರೊ. ಶಿವಶಂಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ಪ್ರಮುಖರಾದ ಡಾ.ಇ.ಎಸ್.ಜೆ.ಪ್ರಭು ಕಿರಣ್, ಡಾ. ವಿಲ್ಮಾ ಮೀರಾ ಡಿಸೋಜ, ಡಾ.ಗಿರೀಶ್ ನಾವಡ, ಡಾ. ರಂಜನ್ ಸಿ. ಬ್ರಿಟ್ಟೋ, ಡಾ.ಅನುಷಾ ಜಿ. ಸನಿಲ್, ಫಾ.ಅಜಿತ್ ಪಿ. ಲೋಬೋ, ಫಾ.ಜಾರ್ಜ್ ಸಿಕ್ವೇರಾ, ಫಾ. ಡೊನಾಲ್ಡ್, ಡಾ. ಆ್ಯಂಟನಿ, ಡಾ.ವೆಂಕಟೇಶ್, ಡಾ. ಉದಯ ಕುಮಾರ್, ಡಾ.ಧನ್ಯಾ ದೇವಸ್ಯ, ಪ್ರೊ.ಸಿಂತಿಯಾ, ಪ್ರೊ. ಚರಿಷ್ಮಾ, ಭ. ನ್ಯಾನ್ಸಿ, ಫೋರ್ವಿಂಡ್ಸ್ನ ಇಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್ ವೈದ್ಯಕೀಯ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಕೆಲ್ವಿನ್ ಪಾಯಸ್ ಸುದ್ದಿಗೋಷ್ಠಿಯನ್ನು ನಿರ್ವಹಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ: ಅಪಘಾತ ತಪ್ಪಿಸಲೆತ್ನಿಸಿ ಎರಡು ಬೈಕ್ ಗಳಿಗೆ ಢಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದ ಕಾರು

Next Post

ವಿಟ್ಲ : ಶಾಲಾ ಮಕ್ಕಳಿದ್ದ ಕಾರು ಬ್ರೇಕ್ ಫೇಲ್,ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹಲವರಿಗೆ ಗಾಯ

Related Posts

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.
ಕರಾವಳಿ

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
14
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
30
Next Post
ವಿಟ್ಲ : ಶಾಲಾ ಮಕ್ಕಳಿದ್ದ ಕಾರು ಬ್ರೇಕ್ ಫೇಲ್,ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹಲವರಿಗೆ ಗಾಯ

ವಿಟ್ಲ : ಶಾಲಾ ಮಕ್ಕಳಿದ್ದ ಕಾರು ಬ್ರೇಕ್ ಫೇಲ್,ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹಲವರಿಗೆ ಗಾಯ

Discussion about this post

Recent News

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
14
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d