• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಗ್ ತೆಗೆದು, ಮೀಸೆ ಬೋಳಿಸಿಕೊಂಡು ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೊ ರವಿ ; 11 ದಿನದ ಬಳಿಕ‌ ಬಂಧನ

Coastal Times by Coastal Times
January 13, 2023
in ಕ್ರೈಮ್ ನ್ಯೂಸ್
ವಿಗ್ ತೆಗೆದು, ಮೀಸೆ ಬೋಳಿಸಿಕೊಂಡು ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೊ ರವಿ ; 11 ದಿನದ ಬಳಿಕ‌ ಬಂಧನ
87
VIEWS
WhatsappTelegramShare on FacebookShare on Twitter

ಮೈಸೂರು: ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರಿಗೆ ಕೆಲಸ ನೀಡುವ ಭರವಸೆ ನೀಡಿ ಅವರನ್ನು ಬಲವಂತವಾಗಿ ವಿವಾಹವಾಗಿ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಸ್ವತಃ ಸಂತ್ರಸ್ತೆಯೇ ಆತನ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಿಸಿದ್ದರು.

ಈ ದೂರಿನ ನಂತರ ರಾಜ್ಯ ರಾಜಕಾರಣದಲ್ಲಿ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಬಾರಿ ಸದ್ದು ಮಾಡಿತ್ತು. ದೂರು ದಾಖಲಿ ಹತ್ತು ದಿನವಾದರೂ ಆತ ಸಿಕ್ಕಿರಲಿಲ್ಲ. ಕೊನೆಗೂ ಪೊಲೀಸ್​ ಬಲೆಗೆ ಸ್ಯಾಂಟ್ರೂ ರವಿ ಬಿದ್ದಿದ್ದಾನೆ. ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ದೂರದ ಗುಜರಾತ್​ನಲ್ಲಿ ಕರ್ನಾಟಕ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವಿಷಯವನ್ನು ಎಡಿಜಿಪಿ ಅಲೋಕ್​ ಕುಮಾರ್​ ದೃಢಪಡಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಎಡಿಜಿಪಿ ಹೇಳಿದ್ದಿಷ್ಟು: ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಲೋಕ್​ ಕುಮಾರ್​, ’’ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆ ಮರೆಸಿಕೊಂಡಿದ್ದ. ಮೈಸೂರು ಪೊಲೀಸರು ಗುಜರಾತ್​ ಪೊಲೀಸರ ಸಹಾಯದಿಂದ ರವಿಯನ್ನು ಚೇಸ್​ ಮಾಡಿ ಬಂಧಿಸಿದ್ದಾರೆ. ಇಲ್ಲಿನ ವಿಜಯನಗರ ಪೊಲೀಸ್​ ಠಾಣೆಯಲ್ಲಿ 12ನೇ ದಿನದ ಹಿಂದೆ ರವಿ ವಿರುದ್ಧ ಕೇಸ್​ ದಾಖಲಾಗಿತ್ತು. ಮೈಸೂರು ಕಮಿಷನರ್​ ರಮೇಶ್ ಅವರ ನೇತೃತ್ವದಲ್ಲಿ ವಿವಿಧ ತಂಡಗಳನ್ನು ಮಾಡಿಕೊಂಡು ತನಿಖೆ ಆರಂಭಿಸಿದ್ದರು’’ ಎಂದರು.

’’ರಾಜ್ಯದಲ್ಲಿ ರವಿಯ ಬಂಧನಕ್ಕೆ ಹುಡುಕಾಟ ಆರಂಭಿಸಿದ ನಂತರ ಹೊರ ರಾಜ್ಯದಲ್ಲಿ ಓಡಾಟ ಶುರುವಾಗಿತ್ತು. ಈ ಸುಳಿವು ಪೊಲೀಸ್​ ಇಲಾಖೆಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಿಗೆ ತಂಡಗಳನ್ನು ಕಳುಹಿಸಿ ಕೊಡಲಾಗಿತ್ತು. ನಿನ್ನೆ ತೆಲಂಗಾಣದಲ್ಲಿ ಆತ ಇದ್ದ ಎಂಬುದಾಗಿ ತಿಳಿದು ಬಂದಿತ್ತು. ಅಲ್ಲಿ ಹುಡುಕಾಟ ನಡೆಸಿದಾಗ ಸಿಕ್ಕಿರಲಿಲ್ಲ. ಈತ ದಿನಕ್ಕೊಂದು ಸ್ಥಳ ಬದಲಾವಣೆ ಮಾಡಿಕೊಂಡು ತಲೆಯಲ್ಲಿದ್ದ ವಿಗ್ ಅನ್ನು ತೆಗೆದು ಮೀಸೆ ಬೋಳಿಸಿಕೊಂಡು ಯಾರಿಗೂ ಅನುಮಾನ ಬರದಂತೆ ತಲೆ ಮರೆಸಿಕೊಂಡು ಓಡಾಡಿ ಪೊಲೀಸ್​ ಕಾರ್ಯಾಚರಣೆ ದಾರಿ ತಪ್ಪಿಸುತ್ತಿದ್ದ. ಇವತ್ತು ಗುಜರಾತ್​ನ ಅಹಮದಾಬಾದ್​ನಲ್ಲಿರುವುದು ತಿಳಿದು ಅಲ್ಲಿನ ಸ್ಥಳೀಯ ಪೊಲೀಸರ ಸಹಾಯದಿಂದ ರವಿಯನ್ನು ಬಂಧಿಸಲಾಗಿದೆ. ಗುಜರಾತ್​ ಕೋರ್ಟ್​ಗೆ ಹಾಜರುಪಡಿಸಿ ನಂತರ ರಾಜ್ಯಕ್ಕೆ ಕರೆತರಲಾಗುವುದು‘‘ ಎಂದು ಇದೇ ವೇಳೆ ಅಲೋಕ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಾಲ್ಕನೇ ವಿದೇಶಿ ಐಷಾರಾಮಿ ಪ್ರವಾಸಿ ಹಡಗು ” ದಿ ವರ್ಲ್ಡ್ ” ಆಗಮನ ಭವ್ಯ ಸ್ವಾಗತ

Next Post

ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ ; ಎಂ. ವೆಂಕಟೇಶ್

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
60
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
41
Next Post
ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ ; ಎಂ. ವೆಂಕಟೇಶ್

ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ ; ಎಂ. ವೆಂಕಟೇಶ್

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d