ಮಂಗಳೂರು, ಮಾ; 12 ಸುರತ್ಕಲ್ ಬಳಿಯ ಹೊಸಬೆಟ್ಟು ಪರಿಸರದ ಗ್ಯಾರೇಜ್ ಒಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿ ಕಳವುಗೈದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಫೆ.14ರಂದು ರಾತ್ರಿ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿಯ ಫ್ರೆಂಡ್ಸ್ ಗ್ಯಾರೇಜ್ ಬಳಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಘನ ವಾಹನದ ಬಿಡಿಭಾಗಗಳನ್ನು ಕಳವು ಮಾಡಿಕೊಂಡು ತನ್ನ ಈಚರ್ ಲಾರಿಯಲ್ಲಿ ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಗ್ಯಾರೇಜ್ ಮಾಲೀಕರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಳವು ಪ್ರಕರಣದಲ್ಲಿ ತನಿಖೆ ಕೈಗೊಂಡು ಲಾರಿ ಚಾಲಕನಾದ ರಾಜಸ್ಥಾನ ಜೋಧಪುರ್ ಮೂಲದ, ಹಾಲಿ ಬೆಂಗಳೂರು ಬನಶಂಕರಿ ನಿವಾಸಿ ಮುಖೇಶ್ ದಾಸ್ (46) ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ ಕಳವುಗೈದ ರೂ. 96,000/- ಮೌಲ್ಯದ ವಾಹನಗಳ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ KA-02-AM-2335 ಈಚರ್ ಲಾರಿ ಸೇರಿದಂತೆ ರೂ.15,96,000/- ಮೌಲ್ಯದ ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post