
ರಾಮನಗರ: ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ 1.22 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಶಿವಕುಮಾರ್ 1.43, 023 ಮತ ಪಡೆದರೆ, ಜೆಡಿಎಸ್ ಅಭ್ಯರ್ಥಿ ಬಿ. ನಾಗರಾಜು 20,631 ಪಡೆದರು. ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಕೇವಲ 19,753 ಮತ ಪಡೆದು ನಿರಾಸೆ ಅನುಭವಿಸಿದರು.
1 ಲಕ್ಷ ಮತಗಳ ಅಂತರದ ಗೆಲುವು : ಸತತ 7 ಗೆಲುವು ಸಾಧಿಸಿದ್ದ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post