ಬೆಂಗಳೂರು, ಮೇ13 : ಕಾಂಗ್ರೆಸ್ ಜಯಭೇರಿ ಬಾರಿಸುತ್ತಿದ್ದಂತೆಯೇ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಜನತೆ ಇನ್ನು ನೆಮ್ಮದಿಯಿಂದ ಇರಬಹುದು. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗಿದ್ರೆ ಐದು ಗ್ಯಾರಂಟಿಗಳು ಯಾವುದು ?
1. ಗೃಹ ಜ್ಯೋತಿ ಯೋಜನೆ: ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿಕೆ
2. ಯುವನಿಧಿ ಯೋಜನೆ : ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ
3. ಅನ್ನಭಾಗ್ಯ: ಪ್ರತಿ ತಿಂಗಳು ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ
4. ಗೃಹಲಕ್ಷಿ ಯೋಜನೆ: ಮನೆಯ ಮಹಿಳೆಗೆ ಯಜಮಾನನಿಗೆ 2000 ರೂಪಾಯಿ ನೀಡುವುದು
5. ಸ್ತ್ರೀ ಶಕ್ತಿ ಯೋಜನೆ : ಕೈ ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಬಸ್ ಗಳಲ್ಲಿ ಪ್ರಯಾಣ ಅವಕಾಶ
Discover more from Coastal Times Kannada
Subscribe to get the latest posts sent to your email.








Discussion about this post