• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಮೇಲೆ ಹಲ್ಲೆ, ವಿಡಿಯೋ ವೈರಲ್, ಆರೋಪಿ ಬಂಧನ!

Coastal Times by Coastal Times
June 13, 2023
in ರಾಷ್ಟ್ರೀಯ ಸುದ್ದಿ
ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಮೇಲೆ ಹಲ್ಲೆ, ವಿಡಿಯೋ ವೈರಲ್, ಆರೋಪಿ ಬಂಧನ!
128
VIEWS
WhatsappTelegramShare on FacebookShare on Twitter

ಬೆಂಗಳೂರು: ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದ ಚಿಕ್ಕಪಟೇಟೆಯಲ್ಲಿ ವ್ಯಾಪ್ತಿಯಲ್ಲಿ ನಡೆಯುವ ಸಂಡೇಬಜಾರ್ ನಲ್ಲಿ ಈ ಘಟನೆ ನಡೆದಿದ್ದು, ವಿದೇಶಿ ಯೂಟ್ಯೂಬರ್​ ಮೇಲೆ ವ್ಯಾಪಾರಿಯೊಬ್ಬರು ಹಲ್ಲೆ ಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೈರಲ್ ವಿಡಿಯೋದಲ್ಲಿ ಉತ್ಸಾಹದಿಂದಲೇ ನೆದರ್ಲ್ಯಾಂಡ್​ನ ಪೆಡ್ರೋ ಮೊಟಾ ಎಂಬ ವ್ಯಕ್ತಿ ವಿಡಿಯೋ ಮಾಡುತ್ತಿದ್ದ. ಈ ವೇಳೆ ತಾನ್ನು ಇಷ್ಟು ದೊಡ್ಡ ಮಾರುಕಟ್ಟೆಯಲ್ಲಿ ತಾನು ಏನಾದರೂ ಖರೀದಿ ಮಾಡಿಯೇ ತೀರುತ್ತೇನೆ ಎಂದು ಹೇಳುವಾಗಲೇ ಸ್ಥಳೀಯ ವ್ಯಾಪಾರಿಯೋರ್ವ ಆತನ ಕೈ ಹಿಡಿದು ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಅಗ್ರಹಿಸಿದ್ದಾನೆ.

ಆದರೆ ಆತನ ಮಾತು ಅರ್ಥವಾಗದ ವಿದೇಶಿ ಯೂಟ್ಯೂಬರ್ ಅಲ್ಲಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ. ಆದರೂ ಆತನನ್ನು ಆ ವ್ಯಾಪಾರಿ ಮತ್ತು ಇತರರು ಅಟ್ಟಾಡಿಸಿದ್ದಾರೆ. ಆದರೆ ಕೆಲವೇ ಕ್ಷಣಗಳ ಅಂತರದಲ್ಲಿ ವಿದೇಶಿ ಯೂಟ್ಯೂಬರ್ ಪಾರಾಗಿದ್ದಾನೆ.  ಈ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಗಮನಕ್ಕೂ ತರಲಾಗಿದೆ.

ಪೂರ್ಣ ವಿಡಿಯೊವನ್ನು ಯುಟ್ಯೂಬ್ ನಲ್ಲಿ ಮ್ಯಾಡ್ಲಿ ರೋವರ್ ಹಂಚಿಕೊಂಡಿದ್ದು ಇಂಡಿಯಾದ ಕಳ್ಳರ ಮಾರುಕಟ್ಟೆಯಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ ಎಂದಷ್ಟೇ ಅವರು 18.14 ನಿಮಿಷದ ವಿಡಿಯೊ ಹಂಚಿಕೊಂಡಿದ್ದಾರೆ. ಇದೇ ವಿಡಿಯೊದಲ್ಲಿ ಮುಸ್ಲಿಂ ವ್ಯಾಪಾರಿಯಿಂದಾದ ಹಲ್ಲೆ ಹಾಗೂ ಹಿಂದೂಗಳೆಂದು ಹೇಳಲಾದ ವ್ಯಕ್ತಿಗಳು ದಾರಿ ತೋರಿಸುತ್ತಿರುವ ದೃಶ್ಯಗಳನ್ನು ಎಡಿಟ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡಲಾಗುತ್ತಿದೆ.

ಇನ್ನೂ ಹಲವರು ಈ ವಿಡಿಯೊ ಹಂಚಿಕೊಂಡು ಬೆಂಗಳೂರು ಪೊಲೀಸರು ಮ್ಯಾಡ್ಲಿ ರೋವರ್‌ಗೆ ಸೂಕ್ತ ರಕ್ಷಣೆ ನೀಡಿ, ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಿ. ಆ ಮೂಲಕ ವಿದೇಶಿ ಪ್ರಜೆಗಳಿಗೆ ಭದ್ರತೆ ಭಾವ ಮೂಡಿಸಿ ಎಂದು ಹೇಳಿದ್ದಾರೆ. ಹಲ್ಲೆ ಆರೋಪದಡಿ ಬಟ್ಟೆ ವ್ಯಾಪಾರಿ ನವಾಬ್‌ನನ್ನು (58) ಕಾಟನ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಆರೋಪಿ ನವಾಬ್, ಹಳೇ ಗುಡ್ಡದಹಳ್ಳಿ ನಿವಾಸಿ. ವೃತ್ತಿಯಲ್ಲಿ ಆಟೊ ಚಾಲಕ. ಪ್ರತಿ ಭಾನುವಾರ ಚಿಕ್ಕಪೇಟೆಯ ಮಾರುಕಟ್ಟೆಯಲ್ಲಿ ಹಳೇ ಬಟ್ಟೆ ಮಾರಾಟ ಮಾಡುತ್ತಿದ್ದ. ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ವಿಡಿಯೊ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

@BlrCityPolice Dutch tourist/Youtuber attacked in Chicpet, Bengaluru without any reason.https://t.co/DzofarcZT0 pic.twitter.com/EaablNuzoU

— Jaspal Singh (@jaspal811982) June 11, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೊಣಾಜೆ : ಮೆಥಾಂಫೆಟಾಮೈನ್ ಮಾದಕ ದ್ರವ್ಯ ಮಾರಾಟ ಇಬ್ಬರ ಸೆರೆ

Next Post

“ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 – 2023 ” ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
51
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
58
Next Post
“ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 – 2023 ” ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ

"ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 - 2023 " ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d