ಉಜಿರೆ: ‘ಸ್ವಯಂ ಪ್ರೇರಣೆ, ಪ್ರೀತಿ ವಿಶ್ವಾಸ, ಆತ್ಮೀಯತೆ, ಆಪ್ತಸಲಹೆ, ಮನಪರಿವರ್ತನೆ ಮೂಲಕ ಮದ್ಯ ವ್ಯಸನಿಗಳು ದುಶ್ಚಟ ಮುಕ್ತರಾಗಬಹುದು’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶುಕ್ರವಾರ ಧರ್ಮಸ್ಥಳದಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನಮುಕ್ತರಾದ 1,270 ಮಂದಿ ನವಜೀವನ ಸದಸ್ಯರ ಶತದಿನೋತ್ಸವದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಜನಜಾಗೃತಿ ವೇದಿಕೆಯ ವಾರ್ಷಿಕ ವರದಿ ಬಿಡುಗಡೆಗೊಳಿಸಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಬಸವಣ್ಣೆಪ್ಪ ತುಬಾಕಿ ಮಾತನಾಡಿ, ‘ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದರು.
ವ್ಯಸನ ಮುಕ್ತರ ಕುಟುಂಬದ ಪರವಾಗಿ ಕೊಪ್ಪಳ ತಾಲ್ಲೂಕಿನ ಭಾಗ್ಯಲಕ್ಷ್ಮೀ ಮತ್ತು ರಾಮದುರ್ಗ ತಾಲ್ಲೂಕಿನ ಮಂಜುಳಾ ಶಿವಾನಂದ ಅನಿಸಿಕೆ ವ್ಯಕ್ತಪಡಿಸಿದರು. ಮದ್ಯವ್ಯಸನಿಗಳನ್ನು ಮದ್ಯವರ್ಜನ ಶಿಬಿರಕ್ಕೆ ಸೇರಿಸಿ ವ್ಯಸನಮುಕ್ತರಾಗಿ ಮಾಡಿದ ಎಂಟು ಮಂದಿಯನ್ನು ‘ಜಾಗೃತಿ ಅಣ್ಣ’ ಮತ್ತು ‘ಜಾಗೃತಿ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸನ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಇದ್ದರು.
Discover more from Coastal Times Kannada
Subscribe to get the latest posts sent to your email.







Discussion about this post