ಕೊಣಾಜೆ, ಆ.13: ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ಯುವಕನೋರ್ವನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಶನಿವಾರ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್(40) ಹಲ್ಲೆಗೆ ಒಳಗಾದವರು. ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು, ಈತ ಉಳ್ಳಾಲದ ನಟೋರಿಯಸ್ ಗ್ಯಾಂಗ್ ಟಾರ್ಗೆಟ್ ಗ್ರೂಪಿನ ಸಕ್ರಿಯ ಸದಸ್ಯ ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆ ಕೊಡಿಸಲೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದ. ಆದರೆ ಅವರಿಗೆ ಬಾಡಿಗೆಗೆ ಮನೆ ನೀಡುವುದಕ್ಕೆ ಮನ್ಸೂರ್ ಆಕ್ಷೇಪ ವ್ಯಕ್ತಪಡಿಸಿದ್ದು, ರೌಡಿಗಳಿಗೆ ಮನೆ ನೀಡದಂತೆ ಮನೆಯವರಿಗೆ ಹೇಳಿದ್ದರೆನ್ನಲಾಗಿದೆ. ಇದೇ ವಿಚಾರವಾಗಿ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟಕ್ಕೂ ಕಾರಣವಾಯಿತೆನ್ನಲಾಗಿದೆ. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾರ್ಗೆಟ್ ತಂಡದಲ್ಲಿದ್ದ ಆರೋಪಿ! : ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ
Discover more from Coastal Times Kannada
Subscribe to get the latest posts sent to your email.
Discussion about this post