ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ ಹಿನ್ನೆಲೆಯಲ್ಲಿ ಪತ್ನಿ ಬ್ಲೋಸಂ ಫರ್ನಾಂಡಿಸ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಆಸ್ಕರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು. ಈ ವೇಳೆ ಪಾಲ್ಗೊಳ್ಳುವಂತೆ ಸೋನಿಯಾರಿಗೆ ಬ್ಲೋಸಂ ವಿನಂತಿಸಿದ್ದಾರೆ. ಆಸ್ಕರ್ ನಿಧನ ದೇಶಕ್ಕಾಗಿರುವ ನಷ್ಟ ಎಂದು ಸೋನಿಯಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೇ ಹೊತ್ತಿಗೆ ಆಸ್ಕರ್ ಪಾರ್ಥೀವ ಶರೀರವನ್ನು ಮಂಗಳೂರಿನ ಯೇನೆಪೋಯ ಆಸ್ಪತ್ರೆಯಿಂದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿರುವ ಮಾಹಿತಿ ಲಭಿಸಿದೆ.