ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಸೂಕ್ಷ್ಮ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದರು.
ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. ನೈತಿಕತೆ ಇಲ್ಲದೆ ಬದುಕೋಕೆ ಆಗುತ್ತಾ ಎಂದು ಪ್ರಶ್ನಿಸಿದರು. ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಅಗುತ್ತೆ ಎಂದರು.
ಕರೊನಾ ಹಿನ್ನೆಲೆಯಲ್ಲಿ ಕೇರಳ ಪ್ರವೇಶ ನಿರ್ಬಂಧ ತೆರವು ಮಾಡಲು ಶೀಘ್ರ ಕ್ರಮ ವಹಿಸಲಾಗುವುದು. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಕಲಿದ್ದಲು ಸಮಸ್ಯೆ ವ್ಯವಸ್ಥಿತವಾಗಿ ಪರಿಹರಿಸಲಾಗುವುದು ಎಂದರು.
ಸಚಿವ ಸುನಿಲ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕ ಭರತ್ ಶೆಟ್ಟಿ ಮೊದಲಾದವರು ಜತೆಗಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post