ಉಡುಪಿ, ಅ.13: ಮಕ್ಕಳಿಗೆ ಲಸಿಕೆ ವಿಚಾರವಾಗಿ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ “ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರದ ಕಮರ್ಷಿಯಲೈಶನ್ ಮಾಡಲು ಪ್ರಮಾಣ ಪತ್ರದ ನಿರೀಕ್ಷೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರುನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.
ಮಕ್ಕಳ ಲಸಿಕೆ ಕೊನೆಯ ಸರ್ಟಿಫಿಕೇಶನ್ ನಿರೀಕ್ಷೆಯಲ್ಲಿದ್ದೇವೆ. ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರದ ಸರ್ಟಿಫಿಕೇಶನ್ ಬರಬೇಕಾಗಿದೆ ಎಂದರು. ರಾಜ್ಯದಲ್ಲಿ ಈಗಾಗಲೇ ಶೇ. 82 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೇ. 90 ಮೊದಲ ಡೋಸ್ ಪೂರೈಸುತ್ತೇವೆ. ಎರಡನೇ ಡೋಸ್ ಡಿಸೆಂಬರ್ ಅಂತ್ಯದೊಳಗೆ ಶೇ. 70 ಪೂರ್ಣ ಮಾಡುವ ವಿಶ್ವಾಸವಿದೆ ಎಂದವರು ಹೇಳಿದರು.
ನಾವು 2 ರಿಂದ 18 ವರ್ಷದೊಳಗಿನ ಮಕ್ಕಳ ರಕ್ಷಣೆ ಮಾಡಬೇಕಾಗಿದೆ. ಅಂತಿಮ ನಿರ್ಧಾರ ಆದ ತಕ್ಷಣ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಕೊಡುತ್ತೇವೆ ಎಂದರು.
ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನನ್ನು ತರುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ಬಹಳಷ್ಟು ಚಿಂತನೆ ಮಾಡಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಇರುವ ಕಾಯ್ದೆ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಆದಷ್ಟು ಬೇಗನೆ ಕಾನೂನು ತರಬೇಕಾಗಿ ಬೇಕಾದ ಎಲ್ಲಾ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಇನ್ನು ಡಿಕೆಶಿ ರಹಸ್ಯ ಮಾತುಕತೆ ವಿಚಾರವಾಗಿ ಪ್ರತಿಕ್ರಿಯಿಸಲು ಸಿ.ಎಂ ನಿರಾಕರಿಸಿದ್ದಾರೆ.
Discussion about this post