ಉಡುಪಿ: ಧ್ಯಾನ, ಜ್ಞಾನದಿಂದ ಅರಿವಿನ ಪೂರ್ಣಪ್ರಜ್ಞರಾಗಿ ವಿದ್ಯಾರ್ಥಿಗಳು ಜಗತ್ತು ಗೆಲ್ಲುವ ಸಾಧಕರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಪಡುಬಿದ್ರಿ ಸಮೀಪದ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡ ನಿರ್ಮಾಣದ 7.40ಕೋಟಿ ರೂ.ವೆಚ್ಚದ ಯೋಜನೆಗೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಪ್ರಜ್ಞಾಶೀಲರಾಗಿರುವುದೇ ಬದುಕಿನ ಬಹುದೊಡ್ಡ ಸಾಧನೆ,ಯಾವುದೇ ಕೆಲಸ ಕಾರ್ಯಗಳಲ್ಲಿ ಪ್ರಜ್ಞಾಪೂರ್ವಕವಾಗಿ ತೊಡಗಿಸಿಕೊಳ್ಳಬೇಕು. ಆಧ್ಯಾತ್ಮಿಕ ನೆಲೆಯಲ್ಲಿ ನಾನು ಯಾರು ಎನ್ನುವ ಅರಿವಿನ ಪೂರ್ಣತೆಯಿಂದಷ್ಟೇ ಜಗತ್ತಿನ ಅರಿವು ಹೊಂದಲು ಸಾಧ್ಯ ,ಬದುಕಿನಲ್ಲಿ ಪೂರ್ಣತೆಯನ್ನು ಸಾಧಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರಿಪೂರ್ಣ ಸುಶಿಕ್ಷಿತರನ್ನಾಗಿಸುವಲ್ಲಿ ಅದಮಾರು ಮಠದ ವತಿಯಿಂದ ನಿರ್ವಹಿಸಲ್ಪಡುತ್ತಿರುವ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಅದಮಾರು ಮಠ ಮತ್ತು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಬ್ರಾಂಡಿಂಗ್ ಆಗಿವೆ ಎಂದರು.
ಅದಮಾರು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ, ಉಪ ಪ್ರಾಂಶುಪಾಲೆ ಒಲ್ವಿಟಾ ಡಿ ಸೋಜ, ವಿವಿಧ ಸಂಸ್ಥೆಗಳ ಮುಖ್ಯಸ್ಥರಾದ ಡಾ. ರಾಘವೇಂದ್ರ ಎ., ಡಾ. ಪ್ರಕಾಶ್ ರಾವ್, ಪ್ರತಿಮಾ ಬಾಳಿಗಾ, ಗುರುರಾಜ್, ವೆಂಕಟರಮಣ ಮುಚ್ಚಿಂತಾಯ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೊಲೀಸ್ ಅಧೀಕ್ಷಕ ಡಾ. ವಿಷ್ಣುವರ್ಧನ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ನಾಯಕ್, ಉದಯ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಶಿವಪ್ರಸಾದ್ ಶೆಟ್ಟಿ, ಮಿಥುನ್ ಹೆಗ್ಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭುವಾನಾಭಿರಾಮ ಉಡುಪ ಮೊದಲಾದವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post