• About us
  • Contact us
  • Disclaimer
Tuesday, October 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

Coastal Times by Coastal Times
October 13, 2026
in ಕರಾವಳಿ
ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ
41
VIEWS
WhatsappTelegramShare on FacebookShare on Twitter

ಮಂಗಳೂರು: ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ), ಮಂಗಳೂರು, ಅಕ್ಟೋಬರ್ 2026ರ ಸೆಮಿಸ್ಟರ್ ಅಂತರ್ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಸೋಮವಾರ, 12 ಅಕ್ಟೋಬರ್ 2026ರಂದು ಕೆಲವು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಈ ಕೆಳಗಿನ ಸ್ಪಷ್ಟೀಕರಣವನ್ನು ನೀಡಲು ಬಯಸುತ್ತದೆ.

ಕಾಲೇಜಿನ ಅನುಮೋದಿತ ಶೈಕ್ಷಣಿಕ ಕ್ಯಾಲೆಂಡರ್‌ಗೆ ಅನುಗುಣವಾಗಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಸರ್ಕಾರ ಘೋಷಿಸಿರುವ ಯಾವುದೇ ಸಾರ್ವಜನಿಕ ರಜಾದಿನಗಳಲ್ಲಿ ಪರೀಕ್ಷೆಗಳನ್ನು ನಿಗದಿಪಡಿಸಲಾಗಿಲ್ಲ.

ಪರೀಕ್ಷೆಗಳ ಕರಡು ವೇಳಾಪಟ್ಟಿಯನ್ನು 11 ಸೆಪ್ಟೆಂಬರ್ 2026ರಂದು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಕಟಿಸಲಾಗಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು, ಸ್ಪಷ್ಟೀಕರಣಗಳನ್ನು ಪಡೆಯಲು ಅಥವಾ ಅಗತ್ಯ ಬದಲಾವಣೆಗಳನ್ನು ಸೂಚಿಸಲು ವಿದ್ಯಾರ್ಥಿಗಳಿಗೆ ಹದಿನೈದು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳಿಂದ ಯಾವುದೇ ಆಕ್ಷೇಪಣೆಗಳಲ್ಲಿ ಅಥವಾ ಪರೀಕ್ಷಾ ದಿನಾಂಕಗಳ ಬದಲಾವಣೆಗೆ ಸಂಬಂಧಿಸಿದ ಮನವಿಗಳಲ್ಲಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ, 26 ಸೆಪ್ಟೆಂಬರ್ 2026ರಂದು ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಅಲ್ಲದೆ, ಪರೋಕ್ಷವಾದ ಭಾಗವಾಗಿ ಈಗಾಗಲೇ ಯೋಜಿಸಲಾಗಿರುವ ಇಂಟರ್ನ್‌ಶಿಪ್ ಹಾಗೂ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬದ್ಧತೆಗಳನ್ನು ಪರಿಗಣಿಸಿ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಪ್ರಸ್ತುತ ಪ್ರತಿಭಟನೆಯ ಕುರಿತು ಕಾಲೇಜಿಗೆ ಮೊದಲ ಬಾರಿಗೆ 11 ಅಕ್ಟೋಬರ್ 2026ರ ಭಾನುವಾರ ಬೆಳಗ್ಗೆ 11:36ಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜು ಆಡಳಿತವು ಪೊಲೀಸ್ ಆಯುಕ್ತರ ಕಚೇರಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದೆ.

ಸೋಮವಾರ, 12 ಅಕ್ಟೋಬರ್ 2026ರಂದು ಕಾಲೇಜು ಆಡಳಿತಕ್ಕೆ ಯಾವುದೇ ಪೂರ್ವ ಅಧಿಸೂಚನೆ ಮಾಹಿತಿ ನೀಡದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ಕೆಲವು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ನಡೆಸಿದ ಸಂಘಟಿತ ವಿರೋಧ, ಪ್ರತಿಭಟನೆಗಳನ್ನು ಗಮನಿಸಲಾಗಿದೆ.

ವಿದ್ಯಾರ್ಥಿಗಳು ವ್ಯಕ್ತಪಡಿಸಿದ ಕಳವಳಗಳನ್ನು ಪರಿಗಣಿಸಿ ಹಾಗೂ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಸುಗಮವಾಗಿ ನಡೆಯಲು, 19 ಮತ್ತು 22 ಅಕ್ಟೋಬರ್ 2026ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿ ಮರುನಿಗದಿಪಡಿಸಲು ಕಾಲೇಜು ಆಡಳಿತವು ನಿರ್ಧರಿಸಿದೆ. ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಅಧಿಕೃತ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು.

ಈ ಪ್ರತಿಭಟನೆಯಲ್ಲಿ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಿದ್ದರೂ, ಕಾಲೇಜು ಆಡಳಿತವು ಅವರ ಕಳವಳಗಳಿಗೆ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಲು ಸದಾ ಸಿದ್ಧವಾಗಿದೆ. ವಿದ್ಯಾರ್ಥಿಗಳ ನ್ಯಾಯಸಮ್ಮತ ಕಳವಳಗಳಿಗೆ ಸ್ಪಂದಿಸುವುದರ ಜೊತೆಗೆ ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸುವ ಮತ್ತು ಸಂಸ್ಥೆಯ ಶಿಸ್ತನ್ನು ಕಾಪಾಡುವ ಬದ್ಧತೆಯನ್ನು ಈ ನಿರ್ಧಾರವು ಪ್ರತಿಬಿಂಬಿಸುತ್ತದೆ.

ಕಾಲೇಜಿನ ಎಲ್ಲಾ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ಅಗತ್ಯತೆಗಳು, ಸಂಸ್ಥೆಯ ನಿಯಮಾವಳಿಗಳು ಮತ್ತು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳ ನಿರ್ದೇಶನಗಳಿಗೆ ಅನುಗುಣವಾಗಿ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾಲೇಜು ಮತ್ತೊಮ್ಮೆ ದೃಢವಾಗಿ ಸ್ಪಷ್ಟಪಡಿಸುತ್ತದೆ.

ಸಂತ ಆಗ್ನೆಸ್ ಕಾಲೇಜು ಜಾತ್ಯತೀತತೆ, ಸಮಾನತೆ, ಎಲ್ಲರನ್ನೂ ಒಳಗೊಳ್ಳುವ ಮನೋಭಾವ, ಧಾರ್ಮಿಕ ಸಾಮರಸ್ಯ ಹಾಗೂ ಪರಸ್ಪರ ಗೌರವದ ತತ್ವಗಳನ್ನು ಸದಾ ಎತ್ತಿಹಿಡಿದಿದೆ. ಈ ಮೌಲ್ಯಗಳು ಸಂಸ್ಥೆಯ ಶೈಕ್ಷಣಿಕ ಧ್ಯೇಯ ಮತ್ತು ಆಡಳಿತಾತ್ಮಕ ಕಾರ್ಯವೈಖರಿಯ ಮೂಲಾಧಾರಗಳಾಗಿವೆ.

ರಚನಾತ್ಮಕ ಸಂವಾದ ಮತ್ತು ವಿದ್ಯಾರ್ಥಿಗಳ ನ್ಯಾಯಸಮ್ಮತ ಕಳವಳಗಳಿಗೆ ಸ್ಪಂದಿಸುವುದು ಕಾಲೇಜು ಸದಾ ಮುಂದುವರಿಸುತ್ತದೆ. ಆದ್ದರಿಂದ, ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯ ನಿಯಮಗಳು ಹಾಗೂ ಕಾರ್ಯವಿಧಾನಗಳನ್ನು ಗೌರವಿಸಿ, ಶಿಸ್ತು ಮತ್ತು ಸ್ನೇಹತೆಯನ್ನು ಕಾಪಾಡಿಕೊಳ್ಳಬೇಕೆಂದು ಕಾಲೇಜು ನಿರೀಕ್ಷಿಸುತ್ತದೆ.

ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಹಿತಕರ ವರ್ತನೆ, ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಪ್ರಯತ್ನ ಅಥವಾ ಕಾಲೇಜು ಆವರಣದ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ಘಟನೆಗಳ ವಿರುದ್ಧ ಸಂಸ್ಥೆಯ ಅನ್ವಯಿಸುವ ನಿಯಮಾವಳಿಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಕಾಲೇಜು ಸ್ಪಷ್ಟಪಡಿಸುತ್ತದೆ.

ಈ ಸಂದರ್ಭದಲ್ಲಿ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕಾರ ನೀಡುವ, ಸಹಕಾರ ಹಾಗೂ ಬೆಂಬಲ ನೀಡಿದ ಜಿಲ್ಲಾಡಳಿತಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಸಿಬ್ಬಂದಿ ಹಾಗೂ ಪ್ರೊಫೆಸರ್ ಸಂಘದ ಸದಸ್ಯರಿಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಾರೆ.

ಪ್ರಾಂಶುಪಾಲರು
ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ)

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ

Next Post

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

Related Posts

ಮಂಗಳೂರು: ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾದ ಕಾಲೇಜು ಆಡಳಿತ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
ಕರಾವಳಿ

ಮಂಗಳೂರು: ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾದ ಕಾಲೇಜು ಆಡಳಿತ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

October 12, 2026
58
ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​
ಕರಾವಳಿ

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
96
Next Post
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

Discussion about this post

Recent News

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
28
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d