ಮಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ಆಕ್ರೋಶಗೊಂಡ ಪತಿಯು, ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮೃತರನ್ನು ಮಹಾರಾಷ್ಟ್ರ ಮೂಲದ ಸೋನಾಲಿ (30) ಎಂದು ಗುರುತಿಸಲಾಗಿದೆ. ಆರೋಪಿ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿಯ ಶಿವಪ್ಪ ಮಾದರ್ ಎಂಬುವವರ ಪುತ್ರ ಶಿವಲಿಂಗಪ್ಪ (40) ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆ: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ದಂಪತಿ ವಾಸವಾಗಿದ್ದರು. ಅಕ್ಟೋಬರ್ 12 ರಂದು ದಂಪತಿ ನಡುವೆ ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿ ಶಿವಲಿಂಗಪ್ಪ, ತನ್ನ ಪತ್ನಿ ಸೋನಾಲಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾದ ಕೂಡಲೇ ಕಾವೂರು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಆರೋಪಿ ಶಿವಲಿಂಗಪ್ಪನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post