• About us
  • Contact us
  • Disclaimer
Tuesday, October 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

Coastal Times by Coastal Times
October 13, 2026
in ರಾಷ್ಟ್ರೀಯ ಸುದ್ದಿ
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್
16
VIEWS
WhatsappTelegramShare on FacebookShare on Twitter

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿ ವಿವಿಧ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಸೋಮವಾರ ಆದೇಶಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕಿ ಮತ್ತು ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಡಾ.ಸುಧಾ ಯಾದವ್ ಅವರನ್ನು ರಾಜ್ಯದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಜೊತೆಗೆ, ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೂ ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರಿಗೆ ಸಿಕ್ಕಿಂನ ರಾಜ್ಯಪಾಲರ ಜವಾಬ್ದಾರಿಯನ್ನು ನೀಡಲಾಗಿದೆ.

ಸುಧಾ ಯಾದವ್ ಯಾರು? ; ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್​​ 16ರಂದು ಸುಧಾ ಯಾದವ್​​​​ ಜನಿಸುತ್ತಾರೆ. ಅವರು ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ.

ಸುಧಾ ಯಾದವ್​ ಅವರ ರಾಜಕೀಯ ಹಿನ್ನೆಲೆ : ಸುಧಾ ಯಾದವ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ಮಹಿಳಾ ನಾಯಕಿಯಾಗಿದ್ದು, ಮಾಜಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1994ರಿಂದ 2004ರವರೆಗೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರು, ತಮ್ಮ ಮೊದಲ ಚುನಾವಣೆಯಲ್ಲೇ ಗಮನಾರ್ಹ ಗೆಲುವು ಸಾಧಿಸಿದ್ದರು. 1999ರ ಚುನಾವಣೆಯಲ್ಲಿ ಹರಿಯಾಣದ ಕಾಂಗ್ರೆಸ್ ನಾಯಕ ರಾವ್ ಇಂದ್ರಜಿತ್ ಸಿಂಗ್ ಅವರನ್ನು ಸೋಲಿಸಿದ್ದರು.

ಇನ್ನು ಸುಧಾ ಯಾದವ್ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನದ ಬಳಿಕ ಪಕ್ಷದ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆ ಇವರಿಗಿದೆ. 2015ರಲ್ಲಿ ಅವರನ್ನು ಬಿಜೆಪಿ ಒಬಿಸಿ ಮೋರ್ಚಾದ ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು. 2022ರ ಆಗಸ್ಟ್‌ನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೂ ಅವರನ್ನು ನೇಮಕ ಮಾಡಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

Next Post

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

Related Posts

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು
ರಾಷ್ಟ್ರೀಯ ಸುದ್ದಿ

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು

October 8, 2026
28
ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ
ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

October 7, 2026
23
Next Post
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

Discussion about this post

Recent News

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
31
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಯ ಸ್ಪಷ್ಟೀಕರಣ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d