• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅಲೋಶಿಯಸ್ ಕಾಲೇಜಿನ ಯುವ ಉಪನ್ಯಾಸಕಿ ಮೆಟ್ಟಲಿನಲ್ಲಿ ಬಿದ್ದು ತಲೆಗೆ ಪೆಟ್ಟು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು- ಐವರಿಗೆ ಅಂಗಾಂಗ ದಾನ

Coastal Times by Coastal Times
November 13, 2024
in ಕರಾವಳಿ
ಮಂಗಳೂರು: ಅಲೋಶಿಯಸ್ ಕಾಲೇಜಿನ ಯುವ ಉಪನ್ಯಾಸಕಿ ಮೆಟ್ಟಲಿನಲ್ಲಿ ಬಿದ್ದು ತಲೆಗೆ ಪೆಟ್ಟು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು- ಐವರಿಗೆ ಅಂಗಾಂಗ ದಾನ
325
VIEWS
WhatsappTelegramShare on FacebookShare on Twitter

ಮಂಗಳೂರು, ನ.13: ನಗರದ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಕಾಲೇಜಿನ ಮೆಟ್ಟಿಲಿನಲ್ಲಿ ಅಕಸ್ಮಾತ್ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದವರು ಮೃತಪಟ್ಟಿದ್ದಾರೆ.

ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು. ನ.9ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಅಕಸ್ಮಾತ್ ಬಿದ್ದು ತಲೆಗೆ ಪೆಟ್ಟು ಆಗಿತ್ತೆನ್ನಲಾಗಿದೆ. ಕೂಡಲೇ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕೋಮಾ ಸ್ಥಿತಿಯಲ್ಲಿದ್ದ ಗ್ಲೋರಿಯಾ ಅವರು ನ.13ರ ಬುಧವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಈ ನಡುವೆ, ಅ.11ರಂದು ಕಾಲೇಜು ಕ್ಯಾಂಪಸಿನ ಅಲೋಶಿಯಸ್ ಚಾಪೆಲ್ ನಲ್ಲಿ ಗ್ಲೋರಿಯಾ ಚೇತರಿಕೆ ಆಗಲೆಂದು ಹಾರೈಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿತ್ತು. ಅವರ ಅಂತ್ಯಕ್ರಿಯೆ ನ.14ರ ಮಧ್ಯಾಹ್ನ ಬಜ್ಪೆಯ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಡೆಯಲಿದೆ. ಗ್ಲೋರಿಯಾ ಅವರು ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿದ್ದರು.

ಐವರಿಗೆ ಅಂಗಾಂಗ ದಾನ : ಮೃತಪಟ್ಟ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಳನ್ನು ಐವರಿಗೆ ದಾನ ಮಾಡಲಾಗಿದೆ ಎಂದು ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗ್ಲೋರಿಯಾ ಅವರಿಗೆ anaphylactic reaction ಸಮಸ್ಯೆ ಉಂಟಾಗಿದ್ದು ಇದರ ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರ ತಂಡ ಮೆದುಳು ನಿಷ್ಕ್ರಿಯವಾಗಿರುವ ಬಗ್ಗೆ ನ.11ರಂದು ಸಂಜೆ ನಾಲ್ಕು ಗಂಟೆಗೆ ಘೋಷಣೆ ಮಾಡಿತ್ತು.‌ ಆನಂತರ ಆಕೆಯ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದರು. ಅದರಂತೆ, ಎಜೆ ಆಸ್ಪತ್ರೆಗೆ ಲಿವರ್, ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ಶ್ವಾಸಕೋಶ, ನಾರಾಯಣ ಹೃದಯಾಲಯಕ್ಕೆ ಹಾರ್ಟ್, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಿಡ್ನಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚರ್ಮ ಮತ್ತು ಕಣ್ಣಿನ ಕಾರ್ನಿಯಾವನ್ನು ಉಳಿಸಿಕೊಳ್ಳಲಾಗಿದೆ.

anaphylactic reaction ಎನ್ನುವುದು ಮಾರಣಾಂತಿಕ ಅಲರ್ಜಿ ಕಾಯಿಲೆಯಾಗಿದ್ದು ಇದರಿಂದ ಬಹು ಅಂಗಾಂಗ ವೈಫಲ್ಯ ಉಂಟಾಗುತ್ತದೆ. ಗ್ಲೋರಿಯಾ ಅವರಿಗೆ ಯಾವುದೋ ಆಹಾರ ಸೇವನೆ ಬಳಿಕ ಈ ರೀತಿಯ ಅಲರ್ಜಿ ಉಂಟಾಗಿತ್ತು ಎಂದು ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ಪ್ರಕಟಣೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚಿಗೆ ತ್ರಿವಳಿ ಸಂಭ್ರಮ

Next Post

TV9 Property Expo: ದಿನಾಂಕ : 15-17ರಂದು ಬೆಂಗಳೂರಿನಲ್ಲಿ ಟಿವಿ9 ಎಕ್ಸ್​ಪೋ

Related Posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
ಕರಾವಳಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
20
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ
ಕರಾವಳಿ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
18
Next Post
TV9 Property Expo: ದಿನಾಂಕ : 15-17ರಂದು ಬೆಂಗಳೂರಿನಲ್ಲಿ ಟಿವಿ9 ಎಕ್ಸ್​ಪೋ

TV9 Property Expo: ದಿನಾಂಕ : 15-17ರಂದು ಬೆಂಗಳೂರಿನಲ್ಲಿ ಟಿವಿ9 ಎಕ್ಸ್​ಪೋ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d