ಉಳ್ಳಾಲ: ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಆದರ್ಶ್ ಜ್ಯೋತಿ(22), ಯೋಯಲ್ ಜಾಯ್ಸ್ (22) ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಸ್ಕೂಟರ್ ಮೂಲಕ ಸಾಗಿಸುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಸ್ಕೂಟರ್‌ನ ಢಿಕ್ಕಿಯಲ್ಲಿ 220 ಗ್ರಾಂ ಗಾಂಜಾ ಸಿಕ್ಕಿದೆ. ಈ ಬಗ್ಗೆ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Discussion about this post