ಸುಳ್ಯ: ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಎಂಬಲ್ಲಿ ಮದುವೆ ದಿಬ್ಬಣದ ಇನೋವಾ ಕಾರು ಸೋಮವಾರ ಉರುಳಿ ಬಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಅಸುನೀಗಿದ್ದಾರೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಅವರ 3 ವರ್ಷದ ಮಗು ಶಜಾ ಎಂದು ಗುರುತಿಸಲಾಗಿದೆ.



ಅಪಘಾತದಲ್ಲಿ ಗಾಯಗೊಂಡಿರುವ ನಾಲ್ವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆ ಸಲುವಾಗಿ ಅವರನ್ನು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತರಲಾಗಿದೆ. ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post