• About us
  • Contact us
  • Disclaimer
Friday, September 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

Coastal Times by Coastal Times
December 13, 2024
in ಕ್ರೈಮ್ ನ್ಯೂಸ್
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್
79
VIEWS
WhatsappTelegramShare on FacebookShare on Twitter

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ದರ್ಶನ್ ಸೇರಿ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಇಂದು ಆದೇಶ ಪ್ರಕಟಿಸಿದರು. ಪರಪ್ಪನ ಅಗ್ರಹಾರ‌ ಹಾಗು ವಿವಿಧ ಜೈಲುಗಳಲ್ಲಿರುವ ಆರೋಪಿಗಳಾದ ಪವಿತ್ರಾ ಗೌಡ, ಆರ್‌.ನಾಗರಾಜು, ಎಂ.ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ರಾವ್‌ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ.

ವಿಚಾರಣೆ ವೇಳೆ ದರ್ಶನ್‌ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌, ಚಿತ್ರದುರ್ಗದ ರೇಣುಕಾಸ್ವಾಮಿ ನಟ ದರ್ಶನ್‌ ಗೆಳತಿ ಪವಿತ್ರಾ ಗೌಡರನ್ನು ಮಂಚಕ್ಕೆ ಕರೆದಿದ್ದಾರೆ. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸದ, ಸರಿಯಾದ ನಡತೆ ಹೊಂದಿರದ, ಕಾನೂನಿಗೆ ಎಳ್ಳಷ್ಟೂ ಗೌರವ ನೀಡದ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ರಾಷ್ಟ್ರೀಯ ನಾಯಕ ಎಂದು ಬಿಂಬಿಸಲಾಗುತ್ತಿದೆ. ಬಣ್ಣದ ಬದುಕಿನಲ್ಲಿ ನಾಯಕನಾಗಿದ್ದರೂ ದರ್ಶನ್‌ರನ್ನು ವಿಲನ್‌ ರೀತಿ ಕಾಣಲಾಗುತ್ತಿದೆ. ದರ್ಶನ್‌ ಅವರಿಗೆ ರೇಣುಕಾಸ್ವಾಮಿ ಕೊಲೆ ಮಾಡುವ ಉದ್ದೇಶವಿದ್ದರೆ ನೀರು, ಊಟ ಕೊಡಿ ಎಂದು, ಆತನ ಚಿತ್ರ ವಿಡಿಯೋ ಸೆರೆ ಹಿಡಿದು ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿ ಬಿಡಿ ಎಂದು ಏಕೆ ಹೇಳಿದ್ದರು? ಎಂದು ವಿವರಿಸಿದ್ದರು.

ರೇಣುಕಾಸ್ವಾಮಿಯ ವೃಷಣಕ್ಕೆ ತೀವ್ರವಾಗಿ ಏಟು ಬಿದ್ದಿದ್ದರಿಂದ ರಕ್ತ ಸೋರಿಕೆಯಾಗಿದೆ‌ ಎನ್ನಲಾಗಿದೆ. ರೇಣುಕಾಸ್ವಾಮಿಯ ದೇಹದಲ್ಲಿ ಪತ್ತೆಯಾಗಿರುವುದು 2.5 ಸೆಂಟಿ ಮೀಟರ್‌ ಗಾಯ ಮಾತ್ರ. ಉಳಿದವು ತರಚಿದ ಮಾದರಿಯ ಗಾಯಗಳು. ಇದನ್ನು ವೈದ್ಯರು ತಮ್ಮ ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಬೇಕಿತ್ತು. 10-15 ತರಚಿದ ಗಾಯಗಳಿಂದ ರಕ್ತ ಬಂದಿದೆ ಎಂದು ಹೇಳಬೇಕಿತ್ತು. ಆದರೆ, ತನಿಖಾಧಿಕಾರಿ ಪ್ರಶ್ನೆ ಎತ್ತಿದ ಮೇಲೆ ಆಗಸ್ಟ್‌ 23ರಂದು ರಕ್ತ ಸೋರಿಕೆಯಾಗಿದೆ ಎಂದು ವರದಿ ನೀಡಿದ್ದಾರೆ. ಇದಕ್ಕೆ ಆಧಾರವೇನು? ಇಲ್ಲಿ ಸಕಾರಣವಿರಬೇಕಿತ್ತು. ಜೂನ್‌ 8ರಂದು ರೇಣುಕಾಸ್ವಾಮಿ ಸಾವನ್ನಪ್ಪುವುದಕ್ಕೂ ಮುನ್ನ ಎರಡು ತಾಸು ಮುಂಚಿತವಾಗಿ ಊಟ ಸೇವಿಸಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು ಹೇಳಿದ್ದಾರೆ. ಆದರೆ, ರೇಣುಕಾಸ್ವಾಮಿಗೆ ಊಟ ತಂದರು ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆಯೇ ವಿನಾ ಆತ ಅದನ್ನು ಸೇವಿಸಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷಿ ಇಲ್ಲ. ಆದರೆ, ರೇಣುಕಾಸ್ವಾಮಿ ಕೊನೆಯ ಬಾರಿಗೆ ಊಟ ಮಾಡಿರುವುದು ಜೂನ್‌ 8ರ ಮಧ್ಯಾಹ್ನ 12ರ ಸುಮಾರಿಗೆ ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿನ ದುರ್ಗಾ ರೆಸ್ಟೋರೆಂಟ್‌ನಲ್ಲಿ ಎಂಬುದಕ್ಕೆ ಸಾಕ್ಷಿ ಇದೆ. ಇದಕ್ಕೆ ರೇಣುಕಾಸ್ವಾಮಿಯೇ ಹಣ ಪಾವತಿಸಿದ್ದಾರೆ ಎಂದು ವಾದಿಸಿದ್ದರು.

ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ.ಪ್ರಸನ್ನಕುಮಾರ್‌, ಪ್ರಕರಣದ ಎಲ್ಲಾ ಆರೋಪಿಗಳ ಡಿಜಿಟಲ್‌ ಹೆಜ್ಜೆ ಗುರುತುಗಳು ಘಟನೆಯಲ್ಲಿ ಅವರ ಪಾತ್ರವನ್ನು ನಿರೂಪಿಸುತ್ತದೆ. ಆರೋಪಿಗಳೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ದರ್ಶನ್‌ ಜೊತೆ ಕೆಲಸ ಮಾಡುತ್ತಿದ್ದವರೇ. ಇಡೀ ಪ್ರಕರಣ ಪಿತೂರಿಯ ಭಾಗವಾಗಿ ನಡೆದಿದೆ. ರೇಣುಕಾಸ್ವಾಮಿ ದೇಹದಲ್ಲಿ 17 ಮೂಳೆ ಮುರಿತ ಮತ್ತು 39 ಗಾಯಗಳು ಪತ್ತೆಯಾಗಿವೆ. ದರ್ಶನ್‌ ಹಲ್ಲೆಯಿಂದ ರೇಣುಕಾಸ್ವಾಮಿ ವೃಷಣಕ್ಕೆ ತೀವ್ರ ಹಾನಿಯಾಗಿದೆ ಎಂದು ವಾದಿಸಿದ್ದರು.

ರೇಣುಕಾಸ್ವಾಮಿಯನ್ನು ದರ್ಶನ್‌ ಬೆಂಗಳೂರಿಗೆ ಕರೆಸಿರುವ ವಿಚಾರವನ್ನು ತನ್ನ ಗೆಳತಿ ಪವಿತ್ರಾ ಗೌಡಗೆ ವಾಟ್ಸ್‌ಆ್ಯಪ್‌ ಕರೆ ಮಾಡಿ ತಿಳಿಸಿದ್ದಾರೆ. ರೇಣುಕಾಸ್ವಾಮಿಯ ಕೊಲೆ ಮುಚ್ಚಿಹಾಕುವುದಕ್ಕೆ ದರ್ಶನ್‌ 37.40 ಲಕ್ಷ ರೂಪಾಯಿ ಹಣ ನೀಡಿರುವುದು ಮತ್ತು ಆ ನಂತರ ಬೇರೆ ಬೇರೆ ಆರೋಪಿಗಳಿಂದ ನಿರ್ದಿಷ್ಟ ಮೊತ್ತವನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದರ್ಶನ್‌, ಪವಿತ್ರಾ ಗೌಡ ಮತ್ತಿತರರು ಕಾರಿನಲ್ಲಿ ಬಂದಿರುವುದಕ್ಕೆ ಸಿಸಿಟಿವಿ ದೃಶ್ಯಾವಳಿ, ಕರೆ ದಾಖಲೆಗಳಿವೆ. ರೇಣುಕಾಸ್ವಾಮಿ ಹತ್ಯೆಯು ಐಪಿಸಿ ಸೆಕ್ಷನ್‌ 302 ಅಡಿ ವ್ಯವಸ್ಥಿತ ಕೊಲೆಯೇ ವಿನಾ ಐಪಿಸಿ ಸೆಕ್ಷನ್‌ 304ರ ಅಡಿಯ ನರಹತ್ಯೆ ಅಪರಾಧವಾಗುವುದಿಲ್ಲ ಎಂದು ವಾದಿಸಿದ್ದರು.

ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್‌, ದರ್ಶನ್‌ ಕಾರು ಚಾಲಕ ಎಂ.ಲಕ್ಷ್ಮಣ್‌ ಪರವಾಗಿ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಪ್ರದೋಷ್ ಪರವಾಗಿ ವಕೀಲ ಕೆ.ದಿವಾಕರ್‌, 11ನೇ ಆರೋಪಿಯಾಗಿರುವ ದರ್ಶನ್‌ ವ್ಯವಸ್ಥಾಪಕ ಆರ್‌.ನಾಗರಾಜು ಪರವಾಗಿ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 17 ಮಂದಿ ಆರೋಪಿಗಳಿದ್ದಾರೆ. ಈ ಪೈಕಿ ಐವರಿಗೆ ಜಾಮೀನು ಮಂಜೂರಾಗಿದೆ. ಈಗ ಏಳು ಮಂದಿಗೆ ಜಾಮೀನು ಮಂಜೂರಾಗಿದೆ. ಇನ್ನು ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಧನರಾಜ್‌ ಡಿ ಅಲಿಯಾಸ್‌ ರಾಜು, ವಿ.ವಿನಯ್‌ಗೆ ಜಾಮೀನು ಮಂಜೂರಾಗಿಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಚದುರಂಗದಾಟಕ್ಕೆ ಭಾರತದ ಗುಕೇಶ್​​ ಬಾಸ್: ಚೆನ್ನೈ ಮೂಲದ 18ರ ತರುಣ ಚೆಸ್ ವಿಶ್ವ ಚಾಂಪಿಯನ್ ! ಈತನಿಗೆ ಸಿಕ್ಕ ಕೋಟಿಯೆಷ್ಟು ?

Next Post

ಉಡುಪಿ : ಡಾ.ಶ್ರುತಿ ಬಲ್ಲಾಳ್‌ಗೆ ‘ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
50
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
ಉಡುಪಿ : ಡಾ.ಶ್ರುತಿ ಬಲ್ಲಾಳ್‌ಗೆ ‘ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

ಉಡುಪಿ : ಡಾ.ಶ್ರುತಿ ಬಲ್ಲಾಳ್‌ಗೆ 'ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024' ಪ್ರಶಸ್ತಿ

Discussion about this post

Recent News

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
8
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d