ನವದೆಹಲಿ: ಇತ್ತೀಚೆಗೆ ವಿವಾದಕ್ಕೆ ಒಳಗಾಗಿದ್ದ ಬಿಬಿಸಿ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ಆದಾಯ ತೆರಿಗೆ ಇಲಾಖೆ ತಪಾಸಣೆ ನಡೆಸಿದೆ. ಗುಜರಾತ್ ಕೋಮು ಗಲಭೆ ಕುರಿತು ಬಿಬಿಸಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ( India: The Modi Question } ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ವ್ಯಾಪಕ ಚರ್ಚೆಯಾಗಿತ್ತು.
ತೆರಿಗೆಗೆ ಸಂಬಂಧಿಸಿದಂತೆ ಹಾಗೂ ಅಂತರರಾಷ್ಟ್ರೀಯ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ನವದೆಹಲಿಯ ಕಚೇರಿಯಲ್ಲಿ ಈ ತಪಾಸಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಈ ವೇಳೆ ಐಟಿ ಅಧಿಕಾರಿಗಳು ಬಿಬಿಸಿ ಕಚೇರಿ ಸಿಬ್ಬಂದಿಯ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಬಿಬಿಸಿ ಸಿದ್ಧಪಡಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ತಡೆ ಹಿಡಿದಿರುವುದಕ್ಕೆ ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಯಾವ ಕಾರಣವೂ ಸರಿಯಾಗಿಲ್ಲ, ಸಮಂಜಸವಾಗಿಲ್ಲ ಎಂದು ವಿರೋಧ ಪಕ್ಷಗಳು ಹೇಳಿದ್ದವು.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮಾಹಿತಿ ತಂತ್ರಜ್ಞಾನ ನಿಯಮ– 2021ರ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಬಳಸಿ, ಈ ಸಾಕ್ಷ್ಯಚಿತ್ರವನ್ನು ತಡೆಹಿಡಿಯುವಂತೆ ಯೂಟ್ಯೂಬ್‌ಗೆ, ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ವೆಬ್ ಕೊಂಡಿಗಳನ್ನು ತಡೆಹಿಡಿಯುವಂತೆ ಟ್ವಿಟರ್‌ಗೆ ಸೂಚನೆ ರವಾನಿಸಿತ್ತು.
ಬಿಬಿಸಿ(ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತರರಾಷ್ಟ್ರೀಯ ತೆರಿಗೆ ವ್ಯವಸ್ಥೆಯಲ್ಲಿನ ಅಕ್ರಮಗಳ ಆರೋಪದ ಮೇಲೆ ತೆರಿಗೆ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿಯ ಕೆಲವು ಗಂಟೆಗಳ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2002 ರ ಗುಜರಾತ್ ದಂಗೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದರು
Discover more from Coastal Times Kannada
Subscribe to get the latest posts sent to your email.
Discussion about this post