ದಕ್ಷಿಣ ಕನ್ನಡ,ಫೆ.14: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಶಾಲಾ ಹೆಣ್ಣು ಮಕ್ಕಳಿಗೆ ಅಪರಿಚಿತ ವ್ಯಕ್ತಿಗಳು ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.. ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಮಕ್ಕಳು ಹಾಗೂ ಪೋಷಕರು ಪ್ರಕರಣ ದಾಖಲಿಸಿದ್ಧರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಂಪ್ಯ ಪೊಲೀಸರು ಸಿನಿಮಿಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ತಕ್ಷಣ ಬಂಧಿಸಿದ್ದಾರೆ ….. ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿ ಶಾಲಾ ಹೆಣ್ಣು ಮಕ್ಕಳಿಗೆ ಅಪರಿಚಿತ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ಥಳೀಯರು ಈ ಹಿಂದೆ ಪೋಲಿಸರಿಗೆ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post