• About us
  • Contact us
  • Disclaimer
Saturday, February 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

Coastal Times by Coastal Times
February 14, 2026
in ರಾಷ್ಟ್ರೀಯ ಸುದ್ದಿ
ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !
18
VIEWS
WhatsappTelegramShare on FacebookShare on Twitter

ತಿರುವನಂತಪುರ : ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಅರುಣ್ ಮತ್ತು ಶೆರಿನ್ ಅವರ ಈ ಸಾಹಸದಿಂದ 10 ತಿಂಗಳ ಅಲಿನ್ ಶೆರಿನ್ ಅಬ್ರಹಂ ಅವಳನ್ನು ಅಮರವಾಗಿ ಉಳಿಸಿಕೊಂಡಿದ್ದಾರೆ.

ಬಾಳಿ ಬದುಕಬೇಕಾಗಿದ್ದ ಸಣ್ಣ ಕೂಸು ಅಪಘಾತದಲ್ಲಿ ಮೃತಪಟ್ಟಿದೆ. ಅಲಿನ್ ಶೆರಿನ್ ಎನ್ನುವ 10 ತಿಂಗಳ ಹೆಣ್ಣು ಮಗು ಅಪಘಾತದಲ್ಲಿ ಮೃತಪಟ್ಟಿದ್ದು, ಪೋಷಕರು ಮಗುವಿನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಅಲಿನ್ ಮಗುವಿನ ಮೂತ್ರಪಿಂಡ, ಯಕೃತ್ತು ಮತ್ತು ಹೃದಯ ಕವಾಟಗಳು ನಾಲ್ವರಿಗೆ ಹೊಸ ಜೀವನವನ್ನು ಕೊಡಲಿವೆ . ರಾಜ್ಯದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ ಮಗುವಾಗಿದೆ. ಕೇರಳದ ಕೊಚ್ಚಿಯಲ್ಲಿ ಈ ಘಟನೆ ನಡೆದಿದೆ.

ಫೆಬ್ರವರಿ 5 ರಂದು ಕೊಟ್ಟಾಯಂನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಣ್ಣು ಮಗುವಿಗೆ ಬ್ರೈನ್‌ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದರು. ಇಲ್ಲಿನ ಎಂಸಿ ರಸ್ತೆಯ ಪಲ್ಲಂ ಬೊರ್ಮಾ ಜಂಕ್ಷನ್ ಬಳಿ ಮಧ್ಯಾಹ್ನ 2.30ರ ಸುಮಾರಿಗೆ ತಾಯಿ ಮತ್ತು ಅಜ್ಜ-ಅಜ್ಜಿಯೊಂದಿಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು. ಕುಟುಂಬವು ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಮಗುವನ್ನು ಮೊದಲು ಚಂಗನಶ್ಶೇರಿ ಮತ್ತು ತಿರುವಲ್ಲಾ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ನಂತರ, ಫೆಬ್ರವರಿ 6ರ ರಾತ್ರಿ ತಜ್ಞ ವೈದ್ಯಕೀಯ ಆರೈಕೆಗಾಗಿ ಕೊಚ್ಚಿಯ ಅಮೃತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೈದ್ಯರ ತೀವ್ರ ಪ್ರಯತ್ನಗಳ ಹೊರತಾಗಿಯೂ, ಪುಟ್ಟ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

ಕೇರಳದ ಪತ್ತನಂತಿಟ್ಟದ ಹತ್ತು ತಿಂಗಳ ಮಗು ಅಲಿನ್ ಶೆರಿನ್ ಅಬ್ರಹಾಂ ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಮಗುವಾಗಿದೆ. ಕೊಚ್ಚಿಯ ಅಮೃತ ಆಸ್ಪತ್ರೆಯಿಂದ ಅಂಗಾಂಗಗಳನ್ನು ರಸ್ತೆ ಮೂಲಕ ತಿರುವನಂತಪುರಕ್ಕೆ ಸಾಗಿಸಲಾಗುತ್ತಿದೆ. ಪೊಲೀಸರು ಸಹ ಈ ವಾಹನಕ್ಕೆ ಬೆಂಗಾವಲು ನೀಡುತ್ತಿದ್ದಾರೆ. ಆಂಬ್ಯುಲೆನ್ಸ್ (KL07 DF 3177) ಸಂಜೆ 7.15ರ ಸುಮಾರಿಗೆ ಕೇರಳ ರಾಜಧಾನಿಗೆ ತಲುಪಿದೆ.

ಮಗುವಿನ ಅಂಗಾಂಗಳನ್ನು ಕುನ್ನುಂಪುರಂ, ಎಡಪ್ಪಳ್ಳಿ, ವೈಟ್ಟಿಲ, ಕುಂದನೂರು, ತ್ರಿಪುಣಿತುರ, ಥಲಯೋಲಪರಂಬು, ಕೊಟ್ಟಾಯಂ, ಚೆಂಗನ್ನೂರು, ವೆಂಜರಮೂಡು ಹಾಗೂ ಕಜಕೂಟಂ ಮೂಲಕ ಸಾಗಿಸಲಾಗಿದೆ. ಆಂಬ್ಯುಲೆನ್ಸ್ ಸುಗಮ ಸಂಚಾರಕ್ಕಾಗಿ ಪೊಲೀಸರು ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಲಿದ್ದಾರೆ.

ಅಂಗಗಳನ್ನು ಕೊಚ್ಚಿಯಿಂದ ತಿರುವನಂತಪುರಂಗೆ ವಿಶೇಷವಾಗಿ ವ್ಯವಸ್ಥೆಗೊಳಿಸಲಾದ ‘ಗ್ರೀನ್ ಕಾರಿಡಾರ್’ ರಸ್ತೆ ಮೂಲಕ ಸಾಗಿಸಲಾಗಿದೆ. ಅಂಗಾಂಗ ದಾನ ಪ್ರಕ್ರಿಯೆಯನ್ನು ಸರ್ಕಾರಿ ಸಂಸ್ಥೆ ಕೆ-ಸೊಟ್ಟೊ (ಕೇರಳ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ) ಮೂಲಕ ಮಗುವಿನ ತಂದೆಯ ಒಪ್ಪಿಗೆಯೊಂದಿಗೆ ನಡೆಸಲಾಗಿದೆ.

ಕೇರಳ ಆರೋಗ್ಯ ಸಚಿವೆ ಕೃತಜ್ಞತೆ : ನೋವಿನ ಸಮಯದಲ್ಲೂ ಇತರರ ಜೀವಗಳನ್ನು ಉಳಿಸಲು ತಮ್ಮ ಮಗುವಿನ ಅಂಗಗಳನ್ನು ದಾನ ಮಾಡಿದ್ದಕ್ಕಾಗಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಗುವಿನ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕುಟುಂಬದ ದುಃಖದಲ್ಲಿ ತಾವು ಭಾಗಿ ಎಂದು ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

Related Posts

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾಷ್ಟ್ರೀಯ ಸುದ್ದಿ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
12
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
42

Discussion about this post

Recent News

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
18
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d