• About us
  • Contact us
  • Disclaimer
Saturday, February 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

Coastal Times by Coastal Times
February 14, 2026
in ರಾಜ್ಯ
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
18
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ.13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ವ್ಯಾಪ್ತಿಯ ಎಂ ಸತ್ಯವಾರ ಗ್ರಾಮದ ಸಮೀಪ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಮಹೀಂದ್ರಾ ಎಕ್ಸ್‌ಯುವಿ 700 ಕಾರು ಮೊದಲು ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ಡಿವೈಡರ್‌ಗೆ ಅಪ್ಪಳಿಸಿ ಪಲ್ಟಿಯಾಗಿ ಎದುರು ಬರುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಸರಣಿ ಡಿಕ್ಕಿಗಳ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ವಿದ್ಯಾರ್ಥಿಗಳು ಹಾಗೂ ಬೈಕ್ ಸವಾರ ಗಗನ್ (26) ಸೇರಿ ಒಟ್ಟು 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಗನ್ ಬೈಕ್ ಮೇಲಿಂದ ಎಸೆಯಲ್ಪಟ್ಟು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ವೇಗವಾಗಿದ್ದ ಯುವಕರಿದ್ದ XUV 700 ಕಾರು ನಿಯಂತ್ರಣ ಕಳೆದುಕೊಂಡು ಮೊದಲಿಗೆ ತನ್ನ ಮುಂದೆ ಚಲಿಸುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್​ಗೆ​ ಡಿಕ್ಕಿಯಾಗಿ ಪಕ್ಕದಲ್ಲಿ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಕಾರಿಗೂ (Brezza) ಗುದ್ದಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್​ನ ಚಕ್ರಗಳು ತುಂಡಾಗಿವೆ. ಅಪಘಾತದ ಸಭಸಕ್ಕೆ XUV ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮೃತ ಬೈಕ್ ಸವಾರನನ್ನು ಗಗನ್ (26) ಎಂದು ತಿಳಿದು ಬಂದಿದೆ. ಈತ ತನ್ನದಲ್ಲದ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದು, ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬದಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ. ದೇವರನಾಯಕಹಳ್ಳಿ ಗ್ರಾಮದ ಗಗನ್ ಓದಿನ ಬಳಿಕ ಹಾಪ್ ಕಾಮ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಕಣ್ಣು ಕಾಣದ ತಾಯಿಗೆ ಆಸರೆಯಾಗಿದ್ದ. ಪ್ರತಿದಿನ ಸಂಜೆ 5 ಗಂಟೆಗೆ ಕೆಲಸಕ್ಕೆ ಹೋಗುತ್ತಿದ್ದ ಗಗನ್, ಮುಂಜಾನೆ 3 ಗಂಟೆ ಸಮಯದಲ್ಲಿ ಮನೆಗೆ ಬರುತ್ತಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಮಯದಲ್ಲಿ ಈ ಘೋರ ದುರಂತ ಸಂಭವಿಸಿದೆ.

XUV ಕಾರಿನಲ್ಲಿದ್ದ ಯುವಕರು ಕೊತ್ತನೂರಿನವರು ಎಂದು ತಿಳಿದು ಬಂದಿದೆ. ಅಶ್ವಿನ್ ನಾಯರ್ (17), ಅರ್ಹಾನ್ ಷರೀಫ್ (17), ಅಯಾನ್ ಅಲಿ (17), ಭರತ್ (18), ಎಥಾನ್ ಜಾರ್ಜ್ (17) ಹಾಗೂ ಅಜೀತ್ ಬಾಬಿ (17) ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಆರ್ ವಿ ಹಾಗೂ ಸಿಎಮ್ ಆರ್ ಕಾಲೇಜು ವಿದ್ಯಾರ್ಥಿಗಳೆಂದು ಹೇಳಲಾಗುತ್ತಿದೆ. ಲಾಂಗ್ ಡ್ರೈವ್​ಗೆಂದು ಹೊರಟ್ಟಿದ್ದ ಯುವಕರು ಹೊಸಕೋಟೆಯಿಂದ ದೇವನಹಳ್ಳಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಐಜಿ ಲಾಭೂರಾವ್, ಎಸ್​ಪಿ ಚಂದ್ರಕಾರ್, ಡಿವೈಎಸ್​ಪಿ ಮಲ್ಲೇಶ್, ಸೂಲಿಬೆಲೆ ಠಾಣೆ ಪೊಲೀಸರು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

Next Post

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
130
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

Discussion about this post

Recent News

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
12
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಗ್ ಖರೀದಿಸಿ ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನ, 11.90 ಲಕ್ಷ ರೂ. ಮೌಲ್ಯದ MDMA ವಶ

February 14, 2026
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d