ಮಡಿಕೇರಿ: ಕೊಡಗಿನ ಗಡಿಭಾಗ ಸಂಪಾಜೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಇವರು ಬೆಂಗಳೂರಿನಲ್ಲಿ ವಾಸವಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ 2 ಕುಟುಂಬದ 9 ಮಂದಿ ತೆರಳುತ್ತಿದ್ದರು. ಇವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.

ಒಬ್ಬ ಪುರುಷ ಹಾಗೂ ಒಂದು ಮಗುವಿನ ಪರಿಸ್ಥಿತಿ ತೀರಾ ಗಂಭೀರವಾಗಿದೆ. ಮತ್ತೊಂದು ಮಗು ಅಪಾಯದಿಂದ ಪಾರಾಗಿದೆ. ಮೃತಪಟ್ಟವರಲ್ಲಿ ಶೀಲಾ ಹಾಗೂ ಮಂಜುನಾಥ್ ಎಂಬ ಇಬ್ಬರ ಹೆಸರಷ್ಟೇ ಇಲ್ಲಿಯವರೆಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ. ಮೃತಪಟ್ಟ ಹಾಗೂ ಗಾಯಗೊಂಡ ಎಲ್ಲರನ್ನು ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.
Discover more from Coastal Times Kannada
Subscribe to get the latest posts sent to your email.








Discussion about this post