ಪುತ್ತೂರು, : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿರುವ ಸುಳ್ಯ ಶಾಸಕ ಎಸ್. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದರೆ, ಉಡುಪಿ ಶಾಸಕ ಕೆ.ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ಹೊಸ ಮುಖಕ್ಕೆ ಮಣೆ ಹಾಕಿರುವ ಪುತ್ತೂರು ಕ್ಷೇತ್ರದಲ್ಲಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಸ್ಫೋಟಗೊಂಡಿದೆ.

ಇನ್ನು, ಪುತ್ತೂರು ಕ್ಷೇತ್ರದಲ್ಲಿ ಕಾರ್ಯಕರ್ತರ ವಿರೋಧ ಎದುರಿಸುತ್ತಿದ್ದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಕೈಬಿಟ್ಟು ಬಿಜೆಪಿ ಹೈಕಮಾಂಡ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಟಿಕೆಟ್ ನೀಡಿದೆ. ಆದರೆ, ಜಾತಿ ಲೆಕ್ಕಾಚಾರ ತಾಳೆ ಹಾಕಿ ಗೌಡ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಿ, ಹಿಂದುತ್ವ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಹಿಂದುತ್ವ ಕಾರ್ಯಕರ್ತರು ಆರೋಪಿಸಿದ್ದು, ಈ ಬಗ್ಗೆ ತಮ್ಮ ಅಸಮಾಧಾನವನ್ನೂ ತೋಡಿಕೊಂಡಿದ್ದಾರೆ.
ಹಿಂದುತ್ವ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿರುವ ಹಿಂದುತ್ವ ಕಾರ್ಯಕರ್ತರು, ಇಲ್ಲದಿದ್ದರೆ ನೋಟಾಕ್ಕೆ ಮತ ಹಾಕುವ ಎಚ್ಚರಿಕೆಯನ್ನೂ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post