ಮಂಗಳೂರು, ಎ.13 : ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓರ್ವ ಸಾಮಾನ್ಯ ಅಭ್ಯರ್ಥಿಯನ್ನು ಗುರುತಿಸಿ ನನಗೆ ಸ್ಪರ್ಧಿಸಲು ಟಿಕೆಟ್ ನೀಡಿದ್ದಾರೆ. ಅವರಿಗೆ ನಾನು ಆಭಾರಿ ಆಗಿದ್ದೇನೆ. ಉಳ್ಳಾಲದಲ್ಲಿ ಸಾಮರಸ್ಯ ಹಾಗೂ ಅಭಿವೃದ್ಧಿ ಪರವಾಗಿ ಕೆಲಸ ಕಾರ್ಯಗಳನ್ನು ಮಾಡಲು ನಾನು ಬದ್ಧನಿದ್ದೇನೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ‘ಮಂಗಳೂರು ಕ್ಷೇತ್ರದ ಹಾಲಿ ಶಾಸಕ ಯು.ಟಿ ಖಾದರ್ ಅವರು ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರೂ, ಜನರ ಅಪೇಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇಲ್ಲಿ ಗೆಲ್ಲುವುದು ನಿಶ್ಚಿತ’ ಎಂದು ಸತೀಶ್ ಕುಂಪಲ ಹೇಳಿದರು.

ಕರ್ನಾಟಕದ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಅವರನ್ನು ಘೋಷಣೆ ಮಾಡಲಾಗಿದ್ದು, ಇದು ನಮ್ಮ ಎಲ್ಲಾ ಕಾರ್ಯಕರ್ತರ ಒಮ್ಮತದ ಆಯ್ಕೆ. ಈ ಬಾರಿ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಶತಃಸಿದ್ಧ ಎಂದು ಉಳ್ಳಾಲ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ, ಟಿಕೆಟ್ ಘೋಷಣೆಯಾಗುವವರೆಗೂ ತಾನು ಆಕಾಂಕ್ಷಿಯಾಗಿದ್ದುದು ನಿಜ. ಆದರೆ ಒಮ್ಮೆ ಪಕ್ಷದ ಹಿರಿಯರು ಅಭ್ಯರ್ಥಿಯನ್ನು ಘೋಷಣೆ ಮಾಡಿದ ಬಳಿಕ ಆ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವುದು ನಮ್ಮ ಪರಂಪರೆ ಮತ್ತು ಬದ್ಧತೆ. ಹಾಗಾಗಿ ಸತೀಶ್ ಕುಂಪಲ ಅವರಿಗೆ ಪೂರ್ಣ ಸಹಕಾರ ಮತ್ತು ಬೆಂಬಲ ನೀಡಿ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ನುಡಿದರು.
ಪಕ್ಷದ ಪ್ರಮುಖರಾದ ಚಂದ್ರಹಾಸ ಪಂಡಿತ್ ಹೌಸ್, ಜಗದೀಶ್ ಶೇಣವ, ಯಶವಂತ ಅಮೀನ್, ಚಂದ್ರಹಾಸ ಉಳ್ಳಾಲ, ಚಂದ್ರಹಾಸ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟು ಇದ್ದರು.
Discover more from Coastal Times Kannada
Subscribe to get the latest posts sent to your email.








Discussion about this post