ಮುಂಬೈ: ಭಾರತದ ವಾಣಿಜ್ಯ ರಾಜಧಾನಿಯಲ್ಲಿ ಸೋಮವಾರ ಭಾರಿ ಗಾಳೀಗೆ ಜಾಹೀರಾತು ಫಲಕ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಧೂಳಿನ ಬಿರುಗಾಳಿ ಮತ್ತು ಮಳೆಗೆ ಮುಂಬೈ ಮಹಾನಗರಿ ಬೆಚ್ಚಿಬಿದ್ದಿದೆ. ಧೂಳಿನ ಬಿರುಗಾಳಿ ಕಾರಣ ಮುಂಬೈ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ಅವಧಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ರೈಲುಗಳು ವಿಳಂಬಗೊಂಡಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.
ಘಾಟ್‌ಕೋಪರ್ ಪ್ರದೇಶದ ಚೆಡ್ಡಾನಗರ ಜಂಕ್ಷನ್‌ನಲ್ಲಿ ಪೆಟ್ರೋಲ್ ಪಂಪ್‌ನಲ್ಲಿ 100 ಅಡಿ ಎತ್ತರದ ಅಕ್ರಮ ಜಾಹೀರಾತು ಫಲಕ ಬಿದ್ದಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಮಂದಿ ಗಾಯಗೊಂಡಿದ್ದಾರೆ, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘಾಟ್‌ಕೋಪರ್‌ನಲ್ಲಿ ಹೋರ್ಡಿಂಗ್ ಕುಸಿದ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 100 ಕ್ಕೂ ಹೆಚ್ಚು ಜನರು ಹೋರ್ಡಿಂಗ್ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಇದುವರೆಗೆ 62 ಜನರನ್ನು ಹೊರತೆಗೆಯಲಾಗಿದೆ, ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ, 59 ಇತರರು ಗಾಯಗೊಂಡಿದ್ದಾರೆ ಮತ್ತು ಪ್ರತ್ಯೇಕ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post