ಮಂಗಳೂರು: ನಾನು ಕಂಡುಕೊಂಡಂತೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಬಹಳ ಮುತುವರ್ಜಿಯಿಂದ ಸಾಮಾಜಿಕ ಕಳಕಳಿಯಿಂದ ದೇಶದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅದರಲ್ಲು ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸ್ತುತ್ಯಾರ್ಹ ವಿಚಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಅವರು ಹೇಳಿದರು.
ಅವರು ನಿನ್ನೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾದ “ಸಂಸ್ಕೃತಿ ವೈಭವ” ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದರೂ ಕಲೆಯ ಬಗ್ಗೆ ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು. ಮಕ್ಕಳ ಶೈಕ್ಷಣಿಕ ವಿಚಾರದ ಬಗ್ಗೆ ಕಾಳಜಿ ಇರುವ ಇಂತಹ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೂ ಹೆಮ್ಮೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ SSLC ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ದ.ಕ. ಜಿಲ್ಲೆಯ ಸುಮಾರು ಹನ್ನೊಂದು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮತ್ತು ಆಕಾಶವಾಣಿಯ ಹಿರಿಯ ಉದ್ಘೋಷಕ ಹಾಗೂ ಸಾಹಿತಿ ಮುದ್ದು ಮೂಡುಬೆಳ್ಳೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದರು. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತ ನಿರ್ದೇಶಕ ಎಂ ಆರ್. ವಾಸುದೇವ, NSCDF ಅಧ್ಯಕ್ಷ ಗಂಗಾಧರ್ ಗಾಂಧಿ, ಹಾಗೂ ಲೇಖಕಿ ವಿಂಧ್ಯಾ ಎಸ್. ರೈ, ಕವಿ ಗೋಪಾಲಕೃಷ್ಣ ಶಾಸ್ತಿç ಉಪಸ್ಥಿತರಿದ್ದರು.
ನಂತರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 44 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೀತ ಗಾಯನ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.
Discover more from Coastal Times Kannada
Subscribe to get the latest posts sent to your email.
Discussion about this post