• About us
  • Contact us
  • Disclaimer
Monday, April 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ , ಮಂಗಳೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಬಂಧನ ಪ್ರಕರಣಕ್ಕೆ: ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ

Coastal Times by Coastal Times
June 14, 2023
in ಕರಾವಳಿ
ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ , ಮಂಗಳೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಬಂಧನ ಪ್ರಕರಣಕ್ಕೆ: ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ
147
VIEWS
WhatsappTelegramShare on FacebookShare on Twitter

ಬೆಂಗಳೂರು: ’ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ‘ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಈ ಸಂಬಂಧ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

’ಫೇಸ್‌ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭಾರತೀಯ ಪ್ರಜೆ ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು‘ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ಪ್ರಕರಣದ ವಿವರ : ಮಂಗಳೂರಿನ ಬಿಕರ್ನಕಟ್ಟೆ 45 ವರ್ಷದ ಶೈಲೇಶ್ ಕುಮಾರ್ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ ಕುಬೆರ್ ಎಂಬಲ್ಲಿ ಉದ್ಯೋಗಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ.  ಶೈಲೇಶ್  2019ರಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್‌ಆರ್‌ಸಿ) ಬೆಂಬಲಿಸಿ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದರಿಂದ ಅವರಿಗೆ ಅನಾಮಿಕರಿಂದ ಬೆದರಿಕೆ ಬಂದಿತ್ತು. ಹಾಗಾಗಿ, ಅವರು ತಮ್ಮ ಫೇಸ್‌ಬುಕ್ ಖಾತೆಯನ್ನು ರದ್ದುಪಡಿಸಿದ್ದರು.

ಏತನ್ಮಧ್ಯೆ ಶೈಲೇಶ್ ಕುಮಾರ್ ಹೆಸರಿನಲ್ಲಿ 2020ರ ಫೆಬ್ರುವರಿಯಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಅವರ ಧರ್ಮದ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ತಮ್ಮ ಗಮನಕ್ಕೆ ಬಂದಕೂಡಲೇ ಶೈಲೇಶ್‌ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ತಿಳಿಸಿದ್ದರು.

ಇದೇ ವೇಳೆ ಸೌದಿ ಪೊಲೀಸರು ಶೈಲೇಶ್‌ ಅವರನ್ನು ಬಂಧಿಸಿದ್ದರು. ಈ ಕುರಿತಂತೆ ಮಂಗಳೂರಿನಲ್ಲಿ ಪತ್ನಿ ಕವಿತಾ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್‌ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಅಂತೆಯೇ,  ‘ನಿರಪರಾಧಿಯಾದ ನನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸಿ‘ ಎಂದು ಕೋರಿ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದರು.

ಈ ಮನವಿ ಫಲ ನೀಡದ ಕಾರಣ ಅವರು, ‘ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ‘ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಅನುಸಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ಬುಧವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅತ್ತೆ ಜೊತೆ ನಿತ್ಯವೂ ತಾಯಿಯ ಗಲಾಟೆ , ತಾಯಿ ಕೊಂದು‌ ಸೂಟ್‌ಕೇಸ್‌ನಲ್ಲಿ ಮೃತದೇಹ ತುಂಬಿ ಪೊಲೀಸ್‌ ಠಾಣೆಗೆ ತಂದ ಮಗಳು

Next Post

ವಿದ್ಯಾರ್ಥಿ ಸಹಿತ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ: 1.5 ಕೆ.ಜಿ ಗಾಂಜಾ ವಶ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
16
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
75
Next Post
ವಿದ್ಯಾರ್ಥಿ ಸಹಿತ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ: 1.5 ಕೆ.ಜಿ ಗಾಂಜಾ ವಶ

ವಿದ್ಯಾರ್ಥಿ ಸಹಿತ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ: 1.5 ಕೆ.ಜಿ ಗಾಂಜಾ ವಶ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
17
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d