ಬೆಳ್ತಂಗಡಿ: ಲೋ ಬಿಪಿಯಿಂದ ಹೃದಯಾಘಾತಕ್ಕೆ ಒಳಗಾದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ (19) ಎಂಬಾಕೆ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.
ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ನೆರಿಯ ನಿವಾಸಿ ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ಸುಮಾ ಮೊದಲ ವರ್ಷದ ಬ್ಯಾಚ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈಕೆಗೆ ಆಗಸ್ಟ್ 9 ರಂದು ಅನಾರೋಗ್ಯ ಉಂಟಾಗಿದ್ದು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. 11 ರಂದು ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಆ.13ರಂದು ರಾತ್ರಿ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಕುಟುಂಬದ ಮಾಹಿತಿ ಪ್ರಕಾರ, ಲೋ ಬಿಪಿಯಿಂದಾಗಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮೃತ ಯುವತಿಗೆ ತಂದೆ,ತಾಯಿ ಹಾಗೂ ಸಹೋದರ ಇದ್ದಾರೆ.
Discussion about this post