• About us
  • Contact us
  • Disclaimer
Wednesday, August 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

Coastal Times by Coastal Times
August 14, 2025
in ರಾಜ್ಯ
70
VIEWS
WhatsappTelegramShare on FacebookShare on Twitter

ಬೆಂಗಳೂರು, ಆ 14: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ದರ್ಶನ್ ತೂಗುದೀಪ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ”ಜನಪ್ರಿಯತೆ, ಅಧಿಕಾರ ಅಥವಾ ಸವಲತ್ತು ಏನೇ ಇರಲಿ, ಕಾನೂನಿನೆದುರು ಎಲ್ಲರೂ ಸಮಾನರು” ಎಂದು ಸುಪ್ರೀಂ ಕೋರ್ಟ್​​ ಹೇಳಿದೆ.

ಹೈಕೋರ್ಟ್‌ನ ಆದೇಶವು ಗಂಭೀರ ಕಾನೂನು ದೌರ್ಬಲ್ಯಗಳಿಂದ ಕೂಡಿದೆ. ಜಾಮೀನು ನೀಡಲು ಯಾವುದೇ ವಿಶೇಷ ಕಾರಣವನ್ನು ದಾಖಲಿಸುವಲ್ಲಿ ಆದೇಶವು ವಿಫಲವಾಗಿದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ಆದೇಶವು ಕಾನೂನುಬದ್ಧವಾಗಿ ಸಂಬಂಧಿಸಿದ ಸಂಗತಿಗಳನ್ನು ಬಿಟ್ಟುಬಿಟ್ಟಿದೆ ಎಂದು ಸುಪ್ರೀಂ ತಿಳಿಸಿದೆ. “ಅಪರಾಧದ ಸ್ವರೂಪ, ಆರೋಪಿಯ ಪಾತ್ರ ಮತ್ತು ವಿಚಾರಣೆಯಲ್ಲಿ ಹಸ್ತಕ್ಷೇಪದ ಸ್ಪಷ್ಟ ಪರಿಣಾಮ/ಅಪಾಯವನ್ನು ಪರಿಗಣಿಸದೇ ಇಂತಹ ಗಂಭೀರ ಪ್ರಕರಣದಲ್ಲಿ ಜಾಮೀನು ನೀಡುವುದು ಸಂಪೂರ್ಣವಾಗಿ ಅನಗತ್ಯ ವಿವೇಚನೆಯ ಕ್ರಮ” ಎಂದು ನ್ಯಾಯಪೀಠದ ಪರವಾಗಿ ತೀರ್ಪು ನೀಡುತ್ತಾ ನ್ಯಾಯಮೂರ್ತಿ ಮಹಾದೇವನ್ ಅವರು ತಿಳಿಸಿದರು.

ಹೈಕೋರ್ಟ್ ಆದೇಶದಿಂದ ನೀಡಲಾದ ಸ್ವಾತಂತ್ರ್ಯವು ನ್ಯಾಯಯುತ ಆಡಳಿತಕ್ಕೆ ಬೆದರಿಕೆಯನ್ನು ಒಡ್ಡುತ್ತದೆ. ವಿಚಾರಣಾ ಪ್ರಕ್ರಿಯೆಯ ಹಳಿ ತಪ್ಪಿಸುತ್ತದೆ ಎಂದು ಪೀಠ ಹೇಳಿದೆ. “ಜನಪ್ರಿಯತೆ, ಅಧಿಕಾರ ಅಥವಾ ಸವಲತ್ತುಗಳನ್ನು ಲೆಕ್ಕಿಸದೇ, ಎಲ್ಲರೂ ಕಾನೂನಿಗೆ ಸಮಾನವಾಗಿ ಒಳಪಟ್ಟಿರುತ್ತಾರೆ” ಎಂದು ಪೀಠ ಹೇಳಿದೆ. “ಆರೋಪಿ ಯಾರೇ ಆಗಿರಲಿ, ಆರೋಪಿ ಎಷ್ಟೇ ದೊಡ್ಡವನಿರಲಿ ಅಥವಾ ಚಿಕ್ಕವನಿರಲಿ, ಅವನು ಅಥವಾ ಅವಳು ಯಾರೇ ಇರಲಿ, ಕಾನೂನಿಗೆ ಒಂದೇ ಎಂಬ ಬಲವಾದ ಸಂದೇಶವನ್ನು ಈ ತೀರ್ಪು ನೀಡುತ್ತದೆ” ಎಂದು ನ್ಯಾಯಮೂರ್ತಿ ಪರ್ದಿವಾಲಾ ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್, ಕೇಸ್ ವರ್ಕರ್, ಬ್ರೋಕರ್ ಸಹಿತ ಮೂವರ ಬಂಧನ

Next Post

ಚೆಸ್ ಗ್ರ್ಯಾಂಡ್ ಮಾಸ್ಟರ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಬ್ರಿಟಿಷ್ ಚೆಸ್ ಆಟಗಾರ್ತಿ 10 ವರ್ಷದ ಬೋಧನಾ ಶಿವಾನಂದನ್

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
39
Next Post
ಚೆಸ್ ಗ್ರ್ಯಾಂಡ್ ಮಾಸ್ಟರ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಬ್ರಿಟಿಷ್ ಚೆಸ್ ಆಟಗಾರ್ತಿ 10 ವರ್ಷದ ಬೋಧನಾ ಶಿವಾನಂದನ್

ಚೆಸ್ ಗ್ರ್ಯಾಂಡ್ ಮಾಸ್ಟರ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಬ್ರಿಟಿಷ್ ಚೆಸ್ ಆಟಗಾರ್ತಿ 10 ವರ್ಷದ ಬೋಧನಾ ಶಿವಾನಂದನ್

Recent News

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

August 26, 2026
57
ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

‘ಕಿಂಗ್ಸ್ ಬಜಾರ್’ ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕೆ ಯೋಜನೆ ; ಹೊಸ ಸದಸ್ಯರನ್ನು ಸೇರಿಸಿದರೆ ಭಾರೀ ಕಮಿಷನ್‌, ಎಂಟು ಮಂದಿ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್

August 26, 2026
ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d