ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ʼʼಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿʼʼ ಎಂದು ಆಗ್ರಹಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post