• About us
  • Contact us
  • Disclaimer
Thursday, October 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಾರಾಷ್ಟ್ರ ಎನ್‌ಸಿಪಿ ನಾಯಕನ ಬಾಬಾ ಸಿದ್ದಿಕಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ ,ಇಬ್ಬರ ಬಂಧನ

Coastal Times by Coastal Times
October 14, 2024
in ರಾಷ್ಟ್ರೀಯ ಸುದ್ದಿ
ಮಹಾರಾಷ್ಟ್ರ ಎನ್‌ಸಿಪಿ ನಾಯಕನ ಬಾಬಾ ಸಿದ್ದಿಕಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ ,ಇಬ್ಬರ ಬಂಧನ
17
VIEWS
WhatsappTelegramShare on FacebookShare on Twitter

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಅಜಿತ್ ಪವಾರ್ ಅವರ ಎನ್‌ಸಿಪಿ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಬಾಂದ್ರಾದಲ್ಲಿ ಬಾಬಾ ಅವರ ಮೇಲೆ ಮೂವರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ ಬಾಬಾ ಸಿದ್ದಿಕ್ ಪ್ರಾಣ ಬಿಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದಿಕ್ ಅವರು ಅಜಿತ್ ಪವಾರ್ ಅವರ ಎನ್‌ಸಿಪಿ ಬಣದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಈ ಘಟನೆ ನಡೆದಿದೆ. ಸುಮಾರು ಇಂದು ರಾತ್ರಿ 9.15ರ ಹೊತ್ತಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಬಾಬಾ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆ ಭಾಗದಲ್ಲಿ ಪಟಾಕಿಗಳನ್ನು ಸಿಡಿಸುತ್ತಿದ್ದರು ಎಂದು ಹೇಳಲಾಗಿದೆ. ಗುಂಡಿನ ದಾಳಿ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟೊತ್ತಿಗೆ ಬಾಬಾ ಅವರು ಜೀವಬಿಟ್ಟಿದ್ದರು ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಪೊಲೀಸರ ಪ್ರಕಾರ ಬಾಬಾ ಸಿದ್ದಿಕ್ ಅವರ ಮೇಲಿನ ಗುಂಡಿನ ದಾಳಿಗೆ ಆರೋಪಿಗಳು 9.9 ಎಂಎಂ ಪಿಸ್ತೂಲ್ ಬಳಸಿದ್ದಾರೆ.

ಇಬ್ಬರು ಬಂಧಿತರ ಪೈಕಿ ಒಬ್ಬ ಉತ್ತರಪ್ರದೇಶದವನು ಹಾಗೂ ಮತ್ತೊಬ್ಬ ಹರಿಯಾಣದವನು ಎನ್ನಲಾಗಿದೆ. ಮೂರನೇ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಈ ರಾಜಕಾರಣಿಯ ಮೇಲಿನ ಈ ದಾಳಿಯು ಮಹಾರಾಷ್ಟ್ರ ರಾಜಕಾರಣವನ್ನು ತಲ್ಲಣಗೊಳಿಸಿದೆ. ಈ ದಾಳಿ ಹಿಂದೆ ಭೂಗತ ಜಗತ್ತಿನ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಹೆಚ್ಚುವರಿ ಪೊಲೀಸ್‌ ಕಮೀಷನರ್ ಪರಮ್‌ಜಿತ್ ಸಿಂಗ್ ದಹಿಯಾ‌, ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿಗೆ ಒಳಗಾಗಿದ್ದ ಬಾಬಾ ಸಿದ್ದಿಕ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಇದು ಅತ್ಯಂತ ದುರದೃಷ್ಟಕರ ಘಟನೆ. ನಾನು ವೈದ್ಯರು ಮತ್ತು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಯುಪಿ ಮತ್ತು ಹರಿಯಾಣದವರು ಎಂದು ತಿಳಿದುಬಂದಿದೆ. ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ.

ನಾವು ಮುಂಬೈ ಪೊಲೀಸರಿಗೆ ಖಡಕ್‌ ಸೂಚನೆ ನೀಡಿದ್ದೇವೆ. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಂಬೈ ಪೊಲೀಸರು ಮೂರನೇ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುತ್ತಾರೆ ಎನ್ನುವ ಖಾತ್ರಿ ಇದೆ ಎಂದು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಇವರ ಭೇಟಿ

Next Post

ಮಂಗಳೂರು ದಸರಾ ಶೋಭಾಯಾತ್ರೆ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Related Posts

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್
ರಾಷ್ಟ್ರೀಯ ಸುದ್ದಿ

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
19
ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು
ರಾಷ್ಟ್ರೀಯ ಸುದ್ದಿ

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು

October 8, 2026
28
Next Post
ಮಂಗಳೂರು ದಸರಾ ಶೋಭಾಯಾತ್ರೆ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ಮಂಗಳೂರು ದಸರಾ ಶೋಭಾಯಾತ್ರೆ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
125
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
124
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d