ಬೆಂಗಳೂರು, ನ.13: ನಗರದ ವಿವಿಧ ಕಡೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ನಗದು, ಚಿನ್ನಾಭರಣ ಸಹಿತ ಇತರೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳಿಂದ ಈ ದಾಳಿ ನಡೆದಿದ್ದು, ಮನಿ ಲಾಂಡರಿಂಗ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಒರ್ವರ ಮಗಳು ಶೀಲ, ಕಾಮಾಕ್ಷಿ ಪಾಳ್ಯದಲ್ಲಿ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ ಎಂಬವರ ಮೇಲೆ ದಾಳಿ ನಡೆಸಲಾಗಿದ್ದು, ಸಿಟಿ ಮಾರ್ಕೆಟ್, ಬಸವೇಶ್ವರ ನಗರದಲ್ಲೂ ದಾಳಿ ನಡೆಸಲಾಗಿದೆ.
ದಾಳಿ ವೇಳೆ 23,42,400 ನಗದು, 7,00,000 ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, 109 ಚೆಕ್ಗಳು, 50 ಅನ್ ಡಿಮಾಂಡ್ ಪ್ರಾಮಿಸರಿ ನೋಟ್, 42 ಖಾಲಿ ಬಾಂಡ್ ಪೇಪರ್, 85 ಶುದ್ದ ಕ್ರಯ ಪ್ರತ್ರಗಳು, 35 ಸಾಲ ನಮೂದಿಸಿದ ದಾಖಲಾತಿ, 11 ಈ ಸ್ಪಾಂಪ್ ಪೇಪರ್ಗಳು, 45 ಪಾಕೆಟ್ ಪುಸ್ತಕ, 15 ಅಗ್ರಿಮೆಂಟ್ ಪ್ರತಿಗಳು, 6 ರೋಲೆಕ್ಸ್ ವಾಚ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಹಣದ ಅವಶ್ಯಕತೆ ಇರುವ ಜನರಿಗೆ ಬಡ್ಡಿಗೆ ಎಂದು ಹಣ ನೀಡಿ ಬಳಿಕ ಮೀರಟ್ ಲೆಕ್ಕದಲ್ಲಿ ಹಿಂಸೆ ನೀಡಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post