ಉಡುಪಿ: ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಆರ್ ಪಿಎಫ್ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದುಬಂದಿದೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ಪ್ರವೀಣ್ ಅರುಣ್ ಚೌಗಲೆ ರಾಯಭಾಗದ ಕುಡಚಿಗೆ ಬಂದು ಮೊಬೈಲ್ ಆನ್ ಮಾಡಿದಾಗ ಕಾರ್ಯಾಚರಣೆ ನಡೆಸಿದ ಉಡುಪಿಯ ಪೊಲೀಸರ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಉಡುಪಿಗೆ ಕರೆ ತರಲಾಗುತ್ತಿದೆ.
ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post