ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಂಜುನಾಥ್ ಭಂಡಾರಿ ಜಯಗಳಿಸಿದ್ದಾರೆ.
ಒಟ್ಟು 389 ಮತಗಟ್ಟೆಗಳಲ್ಲಿ ಚಲಾವಣೆಯಾದ 6,011 ಮತಗಳ ಪೈಕಿ, ಬಿಜೆಪಿ ಕೋಟ ಶ್ರೀನಿವಾಸ ಪೂಜಾರಿ 3672 ಮತಗಳನ್ನು ಪಡೆದಿದ್ದು, ಕಾಂಗ್ರಸ್ ನ ಮಂಜುನಾಥ್ ಭಂಡಾರಿ 2079 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ. ಇನ್ನು ಎಸ್ ಡಿಪಿಐ ಅಭ್ಯರ್ಥಿ ಶಾಫಿ.ಕೆ 205ಮತಗಳನ್ನು ಪಡೆದಿದ್ದಾರೆ. 6,011 ಮತಗಳ ಪೈಕಿ 5,955 ಮತಗಳು ಸಿಂಧುವಾಗಿವೆ. 56 ಅಸಿಂಧು ಮತಗಳಾಗಿವೆ.
ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಸತತ ನಾಲ್ಕನೇ ಬಾರಿ ಪರಿಷತ್ ಪ್ರವೇಶ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ‘ನನ್ನ ಗೆಲುವು ಮತದಾರರ, ಪಕ್ಷದ ಕಾರ್ಯಕರ್ತರ ಗೆಲುವು. ಮತದಾರರಿಗೆ ಯಾವುದೇ ಆಮಿಷ ಒಡ್ಡದೆ ಈ ಗೆಲುವು ಸಿಕ್ಕಿದೆ’ ಎಂದು ಹೇಳಿದರು.
ಮಂಜುನಾಥ ಭಂಡಾರಿ ಮಾತನಾಡಿ, ‘ಇದು ಕಾರ್ಯಕರ್ತರು ಪಕ್ಷಕ್ಕೆ ಸಂದ ಗೆಲುವು. 300 ರಷ್ಟು ಮತಗಳ ಕೊರತೆ ಇದ್ದರೂ, ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಲು ಮತದಾರರು ಆಶೀರ್ವಾದ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಅವಕಾಶ ನೀಡಿದ ಪಕ್ಷದ ಹೈಕಮಾಂಡ್, ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post