ಮಂಗಳೂರು: ಅಪ್ರಾಪ್ತ ವಯಸ್ಕನಿಗೆ ದ್ವಿಚಕ್ರವಾಹನ ನೀಡಿ ಅದು ಅಪಘಾತಕ್ಕೆ ಕಾರಣವಾದ ಪ್ರಕರಣವೊಂದರಲ್ಲಿ ಮಂಗಳೂರಿನ ನ್ಯಾಯಾಲಯವು ಸ್ಕೂಟರ್ ಮಾಲಕ ಅಬ್ದುಲ್ ಹಮೀದ್ ಎಂಬಾತನಿಗೆ 25 ಸಾವಿರ ರೂ ದಂಡ ವಿಧಿಸಿದೆ.
ಮಾ.30ರಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ ಬೆಳಗ್ಗಿನ ಜಾವ 3.50ರ ವೇಳೆಗೆ ಬಾಲಕನು ಇತರ ಇಬ್ಬರೊಂದಿಗೆ ದ್ವಿಚಕ್ರ ವಾಹನದಲ್ಲಿ ಸುರತ್ಕಲ್ ಕಡೆಗೆ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ. ಈ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಇದರಿಂದ ಎರಡೂ ಸ್ಕೂಟರ್ ನಲ್ಲಿದ್ದವರು ರಸ್ತೆಗೆ ಬಿದ್ದು ಗಾಯಗೊಂಡಿದ್ದರು.
ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೋಲಿಸ್ ಉಪನಿರೀಕ್ಷಕಿ ರೋಸಮ್ಮ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆ.ಎಂ.ಎಫ್.ಸಿ. ಎಂಟನೇ ನ್ಯಾಯಾಲಯದ ನ್ಯಾಯಾಧೀಶರಾದ ಫವಾಜ್ ಪಿ.ಎ. ಅವರು ಸ್ಕೂಟರ್ ಮಾಲಕ ಅಬ್ದುಲ್ ಹಮೀದ್ ಎಂಬಾತನಿಗೆ 25,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post